ಬೆಂಗಳೂರು: ಆರೋಗ್ಯ ಕ್ಷೇತ್ರಕ್ಕೆ ಬಜೆಟ್ನಲ್ಲಿ ಭರ್ಜರಿ ಕೊಡುಗೆ ನೀಡಲಾಗಿದ್ದು, ಕೊಪ್ಪಳ, ಕಾರವಾರ ಕೊಡುಗು ಜಿಲ್ಲಾಸ್ಪತ್ರೆಯ ಉನ್ನತಿಕರಣಕ್ಕೆ ನಿರ್ಧಾರ ಮಾಡಲಾಗಿದೆ. ಕನಕಪುರ ತಾಲೂಕಿನಲ್ಲಿ ಹೊಸ ವೈದ್ಯಕೀಯ ಕಾಲೇಜು ಸ್ಥಾಪನೆ, ಮೈಸೂರು, ಕಲಬುರಗಿ, ಬೆಳಗಾವಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಸೇರಿದಂತೆ ದೇಶದಲ್ಲೇ ಮೊದಲ ಅಂಗಾಗ ಜೋಡಣೆ ಆಸ್ಪತ್ರೆ ಸ್ಥಾಪನೆಗೆ ನಿರ್ಧಾರ ಮಾಡಲಾಗಿದೆ. ಮೈಸೂರು ಮತ್ತು ಕಲಬುರ್ಗಿಯಲ್ಲಿ 30 ಕೋಟಿ ವೆಚ್ಚದಲ್ಲಿ ಟ್ರಾಮಾ ಕೇರ್ಸ ಸೆಂಟರ್ ತೆರೆಯಲಾಗುವುದು.
ಎತ್ತಿನ ಹೊಳೆ ಯೋಜನೆಗೆ ಪರಿಷ್ಕೃತ 22,252 ಕೋಟಿ ಮೀಸಲು
ಹಿಂದಿನ ಸರ್ಕಾರದ ನೀರಾವರಿ ಯೋಜನೆಯನ್ನ ಕೈ ಬಿಡಲು ಸರ್ಕಾರ ನಿರ್ಧಾರ ಮಾಡಿದೆ. 19 ಕೆರೆ ತುಂಬಿಸು ಯೋಜನೆಗೆ ಬರೊಬ್ಬರಿ 770 ಕೋಟಿ ರೂಪಾಯಿ ಮೀಸಲಿಡಲಾಗಿದೆ. ಯಾದಗಿರಿ ಸೇರಿ 15 ಜಿಲ್ಲೆಯ 99 ಕೆರೆಗಳಿಗೆ ನೀರು ತುಂಬಿಸಲು ಯೋಜನೆ ಜಾರಿ ಮಾಡಲಾಗಿದ್ದು, ಎತ್ತಿನ ಹೊಳೆ ಯೋಜನೆಗೆ ಪರಿಷ್ಕೃತ ಮೊತ್ತ 22,252 ಕೋಟಿ ಮೀಸಲಿಡಲಾಗಿದೆ. ಇನ್ನು ಮೇಕೆದಾಟು ಯೋಜನೆಗೆ ಭೂಸ್ವಾಧಿನ ಪ್ರಕ್ರಿಯೆಗೆ ಚಾಲನೆ ನೀಡಲು ನಿರ್ಧಾರ ಮಾಡಲಾಗಿದೆ.
ಕುಡಿಯುವ ನೀರು ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಅನುದಾನ
ಕುಡಿಯುವ ನೀರು ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಸರ್ಕಾರ ಮುಂದಾಗಿದ್ದು, 172 ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಸರ್ಕಾರ ನಿರ್ಧರಿಸಿದೆ. 19 ಕೆರೆಗಳಿಗೆ ನೀರು ತುಂಬಿಸಲು 770 ಕೋಟಿ ಹಣ ಮೀಸಲು ಇಡಲಾಗಿದೆ. ಬೆಳಗಾವಿ, ದಾವಣಗೆರೆ, ಬಳ್ಳಾರಿ, ಹಾವೇರಿ, ಗದಗ, ಬೀದರ್, ಉತ್ತರ ಕನ್ನಡ, ವಿಜಯನಗರ, ಕೊಪ್ಪಳ, ಕಲಬುರಗಿ ಹಾಗೂ ಯಾದಗಿರಿ ಸೇರಿ ಒಟ್ಟು 823,99 ಕೆರೆಗಳನ್ನು ತುಂಬಿಸಲು ನಿರ್ಧಾರ ಮಾಡಲಾಗಿದೆ.