ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖ ಆಗುತ್ತಿದೆ. ಅದರಂತೆ ಕರ್ನಾಟಕದಲ್ಲಿ ಕಳೆದ 24 ಗಂಟೆಯಲ್ಲಿ 3336 ಜನರನ್ನು ಕೋವಿಡ್ ತಪಾಸಣೆಗೆ ಒಳಪಡಿಸಲಾಗಿದೆ.
ಈ ಪೈಕಿ 89 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಬ್ಬ ಸೋಂಕಿತ ಮೃತಪಟ್ಟಿದ್ದು, 74 ಸೋಂಕಿತರು ಸೋಂಕು ಮುಕ್ತರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬೆಂಗಳೂರಿನಲ್ಲಿ 16 ಮಂದಿಗೆ ಕೋವಿಡ್ ದೃಢಪಟ್ಟಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಒಬ್ಬ ಸೋಂಕಿತ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಶೇಕಡಾ 2.66 ರಷ್ಟಿದೆ. ಒಟ್ಟು 497 ಸಕ್ರಿಯ ಪ್ರಕರಣಗಳಿದ್ದು, ಚಿಕಿತ್ಸೆ ಮುಂದುವರಿದಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.