ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿಯಲ್ಲಿ ಆಮ್ ಆದ್ಮಿ ಪಕ್ಷಕ್ಕೆ ರಬಕವಿ. ಬನಹಟ್ಟಿ. ರಾಂಪುರ. ಹೊಸೂರ. ಯರಗಟ್ಟಿ. ಹನಗಂಡಿ. ಹಳಿಂಗಳಿ. ಕಾಂಗ್ರೆಸ್ ಮತ್ತು ಬಿಜೆಪಿ ದುರಾಡಳಿತಕ್ಕೆ ಬೇಸತ್ತು ಬಡವರ ಪಕ್ಷ ಭ್ರಷ್ಟಾಚಾರ ಮುಕ್ತ ಮಾಡುವ ಪಕ್ಷ ಆಮ್ ಆದ್ಮಿ ಪಕ್ಷಕ್ಕೆ 500 ಜನ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿಕರ್ನಾಟಕ ರಾಜ್ಯದಲ್ಲಿ ಭ್ರಷ್ಟಾಚಾರ ಗಗನಕ್ಕೆರಿರುವದರಿಂದ ಮತದಾರರು ತಕ್ಕ ಪಾಠ ಕಲಿಸುತ್ತಾರೆ. ಬಿಜೆಪಿ ಐದು ವರ್ಷದಲ್ಲಿ ಬಡವರ ಕಣ್ಣಲ್ಲಿ ರಕ್ತ ತರಿಸಿ ತನ್ನ ಆಡಳಿತ ನಡೆಸಿದೆ.
ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಅಂತ್ಯವಾಗುವ ಕಾಲ ಬಂದಿದೆ. ತೇರದಾಳ ಮತಕ್ಷೇತ್ರದ ಜನರು ಪ್ರಜ್ಞಾವಂತ ಮತದಾರರು ಬದಲಾವಣೆ ಬಯಸಿದ್ದಾರೆ. ತೇರದಾಳ ಮತಕ್ಷೇತ್ರದಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಆಶೀರ್ವಾದ ಮಾಡುತ್ತಾರೆ. ತೇರದಾಳ ಮತಕ್ಷೇತ್ರದಲ್ಲಿ ನಮ್ಮ ಗೆಲುವು ಶತಸಿದ್ಧ ಎಂದು ತೇರದಾಳ ಮತಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಧಿಕೃತ ಅಭ್ಯರ್ಥಿ ಅರ್ಜುನ್ ಹಲಗಿಗೌಡರ ಹೇಳಿದರು.
ನಮ್ಮ ಪಕ್ಷಕ್ಕೆ ಯಾವುದೇ ಅಪೇಕ್ಷಪಡಲಾರದೆ ಸ್ವಯಂ ಪ್ರೇರಿತವಾಗಿ ನಮ್ಮ ಆಮ್ ಆದ್ಮಿ ಪಕ್ಷಕ್ಕೆ ಜನರು ಸೇರ್ಪಡೆಯಾಗುತ್ತಿದ್ದೇನೆ. ಇದರಿಂದಲೇ ಗೊತ್ತಾಗುತ್ತದೆ ಕರ್ನಾಟಕ ರಾಜ್ಯದಲ್ಲಿ ಭ್ರಷ್ಟಾಚಾರ ತುಂಬಿತುಳುಕುತ್ತಿದೆ. ಕಾಂಗ್ರೆಸ್ ಬಿಜೆಪಿ ಪಕ್ಷಕ್ಕೆ ಜನ ಬೇಸತ್ತಿದ್ದಾರೆ .
ಪಂಜಾಬ್ ಮತ್ತು ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ಸರ್ಕಾರವಿದೆ ಬಡವರಿಗೆ ನಾನಾ ಯೋಜನೆಗಳನ್ನು ತಂದು ಬಡತನವನ್ನು ನಿರ್ಮೂಲನೆ ಮಾಡಲಿಕ್ಕೆ ನಮ್ಮ ಅರವಿಂದ್ ಕ್ರೇಜಿವಾಲ ಪಣ ತೊಟ್ಟಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಭ್ರಷ್ಟಾಚಾರ ಮುಕ್ತ ಆಡಳಿತ ನಡೆಸಲು ಪಕ್ಷಕ್ಕೆ ಎಲ್ಲ ಮತದಾರರು ಬೆಂಬಲಿಸಿ ಆಶೀರ್ವಾದ ಮಾಡಬೇಕೆಂದು ಹೇಳಿದರು.
ವರದಿ: ಪ್ರಕಾಶ ಕುಂಬಾರ, ಬಾಗಲಕೋಟೆ