ಬೆಂಗಳೂರು: ನಾಯಕಿ ಹರ್ಮನ್ಪ್ರೀತ್ ಕೌರ್, ಆರಂಭಿಕ ಆಟಗಾರ್ತಿ ಯಾಸ್ತಿಕಾ ಭಾಟಿಯಸ್ಫೋಟಕ ಅರ್ಧಶತಕಗಳ ನೆರವಿನಿಂದ ಮುಂಬೈ ಇಂಡಿಯನ್ಸ್ ಮಹಿಳಾ ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 4 ವಿಕೆಟ್ಗಳ ಅಮೋಘ ಜಯ ಸಾಧಿಸಿದೆ.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಮಹಿಳಾ ಪ್ರೀಮಿಯರ್ಲೀಗ್ (WPL 2024) 2ನೇ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲೇ ಮುಂಬೈ ಶುಭಾರಂಭ ಕಂಡಿದೆ.
ಇನ್ನೂ 2023ರ ಮಹಿಳಾ ಪ್ರೀಮಿಯರ್ ಲೀಗ್ ಆವೃತ್ತಿಯ ಫೈನಲ್ನಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಸೋಲು ಕಂಡಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ 2ನೇ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲೂ ಮುಂಬೈ ವಿರುದ್ಧವೇ ಸೋಲನುಭವಿಸಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ಮಹಿಳಾ ತಂಡ 20 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 171 ರನ್ ಬಾರಿಸಿತು. ಬೃಹತ್ ಮೊತ್ತದ ಗುರಿ ಬೆನ್ನತ್ತಿದ ಮುಂಬೈ ತಂಡ 20 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 173 ರನ್ ಸಿಡಿಸಿ ಗೆಲುವು ಸಾಧಿಸಿತು.
ಬೃಹತ್ ಮೊತ್ತದ ಚೇಸಿಂಗ್ ಆರಂಭಿಸಿದ ಮುಂಬೈ ತಂಡಕ್ಕೆ ಕೊನೆಯ ಓವರ್ನಲ್ಲಿ ಮುಂಬೈ ಗೆಲುವಿಗೆ 12 ರನ್ಗಳ ಅಗತ್ಯವಿತ್ತು. ಮೊದಲ ಎಸೆತದಲ್ಲೇ ಮುಂಬೈ ತಂಡ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೀಡಾಯಿತು. ನಂತರ ಮುಂದಿನ 2 ಎಸೆತಗಳಲ್ಲಿ ಕೇವಲ 3 ರನ್ ತಂಡಕ್ಕೆ ಸೇರಿತು. 4ನೇ ಎಸೆತದಲ್ಲಿ ಬೌಂಡರಿ ಬಾರಿಸಿದ ಹರ್ಮನ್ಪ್ರೀತ್ 5ನೇ ಎಸೆತವನ್ನು ಸಿಕ್ಸರ್ ಸಿಡಲು ಹೋಗಿ ಕ್ಯಾಚ್ ನೀಡಿದರು. ಕೊನೇ ಎಸೆತದಲ್ಲಿ 5 ರನ್ಗಳ ಅಗತ್ಯವಿದ್ದಾಗ ಸೂಪರ್ ಓವರ್ ನಿರೀಕ್ಷಿಸಲಾಗಿತ್ತು. ಆದ್ರೆ ಕ್ರೀನಲ್ಲಿದ್ದ ಸಜೀವನ್ ಸಜನ ಸಿಕ್ಸರ್ ಬಾರಿಸುವ ಮೂಲಕ ಗೆಲುವು ತಂದುಕೊಟ್ಟರು.