ನವದೆಹಲಿ: ದೆಹಲಿ ಅಬಕಾರಿ ನೀತಿ ಸಂಬಂಧ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಹಾಗೂ ಸಿಬಿಐನಿಂದ ಬಂಧಿತರಾಗಿರುವ ಆಮ್ ಆದ್ಮಿ ಪಕ್ಷದ ನಾಯಕ ಮನೀಶ್ ಸಿಸೋಡಿಯಾ ಅವರನ್ನುಇಲ್ಲಿನ ವಿಶೇಷ ನ್ಯಾಯಾಲಯವು 2 ವಾರಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿದೆ.
ವಿಶೇಷ ನ್ಯಾಯಮೂರ್ತಿ ಎಂ.ಕೆ ನಾಗಪಾಲ್ ಅವರು, ಸಿಸೋಡಿಯಾ ಅವರನ್ನು ಏಪ್ರಿಲ್ 15ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದ್ದಾರೆ.
ವಿಚಾರಣೆ ವೇಳೆ ಸಿಸೋಡಿಯಾ ಪತಿ ಅನಾರೋಗ್ಯ ಪೀಡಿತೆಯಾಗಿದ್ದು, ಅವರನ್ನು ನೋಡಿಕೊಳ್ಳಬೇಕಾಗಿದೆ. ಪುತ್ರ ವಿದೇಶದಲ್ಲಿ ವ್ಯಾಸಾಂಗ ಮಾಡುತ್ತಿದ್ದಾರೆ. ಹೀಗಾಗಿ ಜಾಮೀನು ಮಂಜೂರು ಮಾಡಬೇಕು ಎಂದು ಸಿಸೋಡಿಯಾ ಪರ ವಕೀಲರು ಮನವಿ ಮಾಡಿದರು.
ಇದಕ್ಕೆ ವಿರೋಧ ವ್ಯಕ್ತಪಡಿಸಿದ ಸಿಬಿಐ ಪರ ವಕೀಲರು, ಸಿಸೋಡಿಯಾ ಅವರು ಸರ್ಕಾರ ಉನ್ನತ ಸ್ಥಾನದಲ್ಲಿದ್ದು, ಜಾಮೀನು ನೀಡಿದರೆ ಸಾಕ್ಷ್ಯ ನಾಶ ಪಡಿಸುವ ಸಾಧ್ಯತೆ ಇದೆ ಹೀಗಾಗಿ ಜಾಮೀನು ನೀಡಬಾರದು ಎಂದು ಆಗ್ರಹಿಸಿದರು. ಇದೀಗ ಸಿಸೋಡಿಯಾ ಅವರನ್ನು 2 ವಾರಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.