ಬೆಂಗಳೂರು ;- ಬೆಂಗಳೂರಿನ ಆರ್.ಆರ್ ನಗರದ ಮೆಟ್ರೋ ನಿಲ್ದಾಣದ ಬಳಿ ಹಿಟ್ ಆಯಂಡ್ ರನ್ಗೆ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಜರುಗಿದೆ.
ಪವನ್ ಮೃತ ಡೆಲಿವರಿ ಬಾಯ್ ಎಂದು ಗುರುತಿಸಲಾಗಿದೆ. ಆರೋಪಿ ಕಾರು ಚಾಲಕ ವಿನಾಯಕ್ ಸೇಲ್ಸ್ ಎಕ್ಸಿಕ್ಯೂಟಿವ್ ಆಗಿ ರಾಜಾಜಿನಗರದ ಮಹೀಂದ್ರ ಶೋ ರೂಂನಲ್ಲಿ ಕೆಲಸ ಮಾಡುತ್ತಿದ್ದಾನೆ. ನಿನ್ನೆ ವೀಕೆಂಡ್ ಹಿನ್ನೆಲೆ ಗೆಳೆಯರ ಜೊತೆ ಪಾರ್ಟಿ ಪಾರ್ಟಿ ಮಾಡಿದ್ದಾನೆ.
ಪಾರ್ಟಿ ಬಳಿಕ ಗೆಳೆಯ ಗೆಳೆಯ ಸಾಗರ್ ಎಂಬವನಿಗೆ ಡ್ರಾಪ್ ನೀಡಲು ಕಾರಿನಲ್ಲಿ ಮೂವರು ಯುವತಿರು ಓರ್ವ ಯುವಕ ತೆರಳಿದ್ದಾರೆ. ವಿನಾಯಕ್ ಕುಡಿದ ಮತ್ತಿನಲ್ಲೇ ಕಾರು ಚಲಾಯಿಸುತ್ತಿದ್ದು, ತಡರಾತ್ರಿ 1:45ರ ಸುಮಾರಿಗೆ ಆರ್.ಆರ್. ನಗರದ ಮೆಟ್ರೋ ನಿಲ್ದಾಣದ ಬಳಿ ಮುಂದೆ ಹೋಗುತ್ತಿದ್ದ ಜೊಮ್ಯಾಟೊ ಡೆಲಿವರಿ ಬಾಯ್ ಪವನ್ ಬೈಕ್ಗೆ ಹಿಂದಿನಿಂದ ಗುದ್ದಿದ್ದಾನೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದ ಪವನ್ನನ್ನು ಕಾರು 100 ಮೀಟರ್ ಎಳೆದೊಯ್ದಿದೆ. ನಂತರ ಪವನ್ ಬಿಟ್ಟು ಕಾರು ಸಮೇತ ಯುವಕ, ಯುವತಿಯರು ಪರಾರಿಯಾಗಲು ಯತ್ನಿಸಿದ್ದಾರೆ. ಇದನ್ನು ಕಂಡ ಸ್ಥಳೀಯರು ಸುಮಾರು 1 ಕಿ.ಮೀ.ವರೆಗೂ ಕಾರನ್ನು ಚೇಸ್ ಮಾಡಿದ್ದಾರೆ. ನಂತರ ಕಾರನ್ನು ಅಡ್ಡ ಹಾಕಿ ಆರೋಪಿ ಚಾಲಕ ವಿನಾಯಕನನ್ನು ಹಿಡಿದು ಸ್ಥಳೀಯರು ಥಳಿಸಿದ್ದಾರೆ. ಕಾರಿನ ಗ್ಲಾಸ್ ಹೊಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ವೇಳೆ ಕಾರಿನಲ್ಲಿದ್ದ ಮೂವರು ಯುವತಿಯರು, ಯುವಕ ಪರಾರಿಯಾಗಿದ್ದಾರೆ. ನಂತರ ಸ್ಥಳೀಯರು ಆರೋಪಿ ವಿನಾಯಕ್ನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.