ದೇವನಹಳ್ಳಿ: ಖಾಸಗಿ ಬಡಾವಣೆಗೆ ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆಯಿಟ್ಟು ‘ ಲೋಕಾಯುಕ್ತ ಬಲೆಗೆ ಬೆಸ್ಕಾಂ ಜೆಇ ನಾಗೇಶ್ ಬಿದಿದ್ದಾರೆ. ಲಂಚಕ್ಕೆ ಬೇಡಿಕೆಯಿಟ್ಟು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ.
ಬೆಂಗಳೂರು ಪೂರ್ವ ತಾಲೂಕಿನ ಆವಲಹಳ್ಳಿಯ ಬೆಸ್ಕಾಂ ಎಇಇ ರಮೇಶ್ ಬಾಬು ಮತ್ತು ಜೆಇ ನಾಗೇಶ್ರಿಂದ ಬೊಮ್ಮನಹಳ್ಳಿ ಗ್ರಾಮದ ಜಮೀನಿನ ಲೇಔಟ್ಗೆ ವಿದ್ಯುತ್ ಸಂಪರ್ಕ ನೀಡಲು ಲಂಚಕ್ಕೆ ಬೇಡಿಕೆ ಇಡಲಾಗಿತ್ತು.
ವಿಜಯಕುಮಾರ್ ಎಂಬುವವರ ಬಳಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಅದೇ ರೀತಿ ಇಂದು ಬೊಮ್ಮನಹಳ್ಳಿಯ ಮಾರ್ಟ್ ಬಳಿ ಲಂಚ ಸ್ವೀಕರಿಸುವ ವೇಳೆ ಲೋಕಾ ಬಲೆಗೆ ನಾಗೇಶ್ ಬಿದಿದ್ದಾರೆ. ಲಂಚ ಸ್ವೀಕರಿಸುವ ವೇಳೆ ರೆಡ್ ಹ್ಯಾಂಡ್ ಆಗಿ ಅಧಿಕಾರಿ ಸಿಕ್ಕಬಿದಿದ್ದಾರೆ. ಲೋಕಾಯುಕ್ತ ಅಧಿಕಾರಿ ಪವನ್ ನೆಜ್ಜೂರು ನೇತೃತ್ವದಲ್ಲಿ ದಾಳಿ ನಡೆಸಿ ಬಂಧಿಸಲಾಗಿದೆ.