ಬೆಂಗಳೂರು ;- ಬೃಹತ್ ಬೆಂಗಳೂರು ಹೋಟೆಲ್ಗಳ ಸಂಘವು, ವಿದ್ಯುತ್ ದರ ಹೆಚ್ಚಳವನ್ನು ಮುಂದಿನ ವರ್ಷಕ್ಕೆ ಮುಂದೂಡಬೇಕು ಎಂದು ಆಗ್ರಹಿಸಿದೆ. ಎಲ್ಲ ಉದ್ಯಮಗಳ ಮಾಲೀಕರಿಗೆ ವಿದ್ಯುತ್ ದರ ಆಗಾಗ ಹೆಚ್ಚಿಸುವುದರಿಂದ ತೊಂದರೆಯಾಗುತ್ತಿದೆ. ಇಂಧನ ಮತ್ತು ವಿದ್ಯುತ್ ಖರೀದಿ ವೆಚ್ಚ ಹೊಂದಾಣಿಕೆ, ನಿಗದಿತ ಬೇಡಿಕೆ ದರ ಹೆಚ್ಚಾಗಿದೆ.
ಏರಿಕೆಯಾಗಿರುವ ದರದ ಮೇಲೂ ಶೇ 9 ತೆರಿಗೆಯೂ ಹೆಚ್ಚಳವಾಗಿದೆ. ಹಾಗಾಗಿ ಈ ದರ ಹೆಚ್ಚಳವನ್ನು ಒಂದು ವರ್ಷದ ಅವಧಿಗೆ ಮುಂದೂಡಬೇಕು ಎಂದು ಒತ್ತಾಯಿಸಿದ್ದಾರೆ.
ವಿದ್ಯುತ್ ತೆರಿಗೆಯನ್ನು ಶೇ 9ರಿಂದ ಶೇ 3ಕ್ಕೆ ಇಳಿಸಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಇಲಾಖೆಗಳು ಪಾವತಿಸಬೇಕಾದ ಬಾಕಿ ಮೊತ್ತವನ್ನು ಬಡ್ಡಿ ಸಹಿತ ಸಂಗ್ರಹಿಸಬೇಕು. ಪ್ರಿಪೇಡ್ ಮೀಟರ್ ಅಳವಡಿಸಿ ಗ್ರಾಹಕರ ಠೇವಣಿ ಹಣವನ್ನು ಹಿಂತಿರುಗಿಸಬೇಕು. ಅನಗತ್ಯ ಆಡಳಿತಾತ್ಮಕ ವೆಚ್ಚಗಳನ್ನು ನಿಯಂತ್ರಿಸಬೇಕು ಎಂದು ಸಂಘದ ಅಧ್ಯಕ್ಷ ಪಿ.ಸಿ. ರಾವ್, ಕಾರ್ಯದರ್ಶಿ ವೀರೇಂದ್ರ ಎನ್. ಕಾಮತ್ ಅವರು ಇಂಧನ ಸಚಿವರಗೆ ಸಲ್ಲಿಸಿರುವ ಮನವಿಯಲ್ಲಿ ಆಗ್ರಹಿಸಿದ್ದಾರೆ.