ಬೆಂಗಳೂರು ;- ರಾಜ್ಯದಲ್ಲಿ ಡೆಂಗ್ಯೂ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗಿದೆ. ಈ ತಿಂಗಳು 15 ದಿನಗಳಲ್ಲಿ 166 ಮಂದಿ ಡೆಂಗಿ ಜ್ವರದಿಂದ ಬಳಲಿದ್ದಾರೆ, ಇದರಿಂದಾಗಿ ಎರಡು ಸಾವಿರದ ಗಡಿ ದಾಟಿದೆ.
ಈಗಾಗಲೇ 70 ಸಾವಿರಕ್ಕೂ ಅಧಿಕ ಡೆಂಗಿ ಶಂಕಿತರನ್ನು ತಪಾಸಣೆಗೆ ಒಳಪಡಿಸಲಾಗಿದೆ. ಅವರಲ್ಲಿ 23 ಸಾವಿರಕ್ಕೂ ಅಧಿಕ ಮಂದಿಯ ರಕ್ತದ ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಡೆಂಗಿ ಪ್ರಕರಣಗಳು ಪತ್ತೆಯಾಗಿವೆ. ಕಳೆದ ವರ್ಷ 9,620 ಮಂದಿ ಡೆಂಗಿ ಜ್ವರದಿಂದ ಬಳಲಿದ್ದರು. ಅವರಲ್ಲಿ ಒಂಬತ್ತು ಮಂದಿ ಜ್ವರದ ತೀವ್ರತೆಗೆ ಮೃತಪಟ್ಟಿರುವುದು ದೃಢಪಟ್ಟಿತ್ತು. ಈ ವರ್ಷ ಯಾವುದೇ ಮರಣ ವರದಿಯಾಗಿಲ್ಲ.
ಬಿಬಿಎಂಪಿ ವ್ಯಾಪ್ತಿಯಲ್ಲಿಯೇ 1,009 ಮಂದಿಯ ರಕ್ತದ ಮಾದರಿಯನ್ನು ಪರೀಕ್ಷೆ ಮಾಡಲಾಗಿದ್ದು, 732 ಮಂದಿಯಲ್ಲಿ ಈ ಜ್ವರ ದೃಢಪಟ್ಟಿದೆ. ಮೈಸೂರಿನಲ್ಲಿ 156, ವಿಜಯಪುರದಲ್ಲಿ 113, ಚಿತ್ರದುರ್ಗದಲ್ಲಿ 91, ಬೆಳಗಾವಿಯಲ್ಲಿ 78, ಧಾರವಾಡದಲ್ಲಿ 71, ಬಳ್ಳಾರಿಯಲ್ಲಿ 69 ಹಾಗೂ ಶಿವಮೊಗ್ಗದಲ್ಲಿ 56 ಪ್ರಕರಣ ವರದಿಯಾಗಿದೆ.