ಕರ್ನಾಟಕದಲ್ಲಿ ಡೆಂಗ್ಯೂ ಆರ್ಭಟ ಮುಂದುವರಿದಿದ್ಜು, ನಿನ್ನೆ ಒಂದೇ ದಿನ 12 ಸಾವಿರ ಪ್ರಕರಣಗಳು ಪತ್ತೆಯಾಗಿದೆ
ನಿನ್ನೆ ರಾಜ್ಯದಲ್ಲಿ 11,480ರಷ್ಟು ಕೇಸ್ಗಳು ದಾಖಲಾಗಿದ್ದು, ಹೊಸದಾಗಿ 448 ಮಂದಿಯಲ್ಲಿ ಡೆಂಗ್ಯೂ ಪತ್ತೆಯಾಗಿದೆ.
ಸಧ್ಯ ರಾಜ್ಯದಲ್ಲಿ 3,230 ಡೆಂಗ್ಯೂ ಪ್ರಕರಣಗಳು ಸಕ್ರಿಯವಾಗಿದ್ದು, ಅದರಲ್ಲಿ 2,610 ಮಂದಿಗೆ ಮನೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಡೆಂಗ್ಯೂ ಜ್ವರದಿಂದ ಆಸ್ಪತ್ರೆಯಲ್ಲಿ 620 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 604 ಮಂದಿಯನ್ನು ಸಾಮಾನ್ಯ ವಾರ್ಡ್ನಲ್ಲಿ ದಾಖಲಾತಿ ಮಾಡಿಕೊಂಡು ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನು16 ಮಂದಿಗೆ ಐಸಿಯೂ ನಲ್ಲಿ ಚಿಕಿತ್ಸೆ ನೀಡುತ್ತಿದ್ದು, ಇಲ್ಲಿಯವರೆಗೆ ಡೆಂಗ್ಯೂ ಹಾವಳಿಗೆ 8 ಮಂದಿ ಬಲಿಯಾಗಿದ್ದಾರೆ. ಕಳೆದ 24 ಗಂಟೆಯಲ್ಲಿ ಒಂದು ವರ್ಷದೊಳಗಿನ 201 ಮಕ್ಕಳು, 18 ವರ್ಷ ಮೇಲ್ಪಟ್ಟ 7,289 ಜನರಲ್ಲಿ ಡೆಂಗ್ಯೂ ದೃಢವಾಗಿದೆ. ಇನ್ನು ಬಿಬಿಎಂಪಿ ವ್ಯಾಪ್ತಿಯಲ್ಲಿ 4 ಸಾವಿರದ ಗಡಿದಾಟಿದ್ದು, ಕಳೆದ 24 ಗಂಟೆಯಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ 265 ಪ್ರಕರಣಗಳು ದೃಢವಾಗಿವೆ. ಇನ್ನು ಬಿಬಿಎಂಪಿ ವ್ಯಾಪ್ತಿಯಲ್ಲಿ 4305 ಪ್ರಕರಣಗಳು ವರದಿಯಾಗಿದ್ದು ಮುಂದಿನ ಡಿಸೆಂಬರ್ ವರೆಗೂ ಡೆಂಗ್ಯೂ ಕೇಸ್ ಗಳು ಹೆಚ್ಚಾಗುವ ಸಾಧ್ಯತೆ ಇದೆ