ರಾಜಧಾನಿ ಬೆಂಗಳೂರು ಸೇರಿ ರಾಜ್ಯದಲ್ಲಿ ಡೆಂಗ್ಯೂ ಆರ್ಭಟ ಜೋರಾಗಿದ್ದು ಕಳೆದ 24 ಗಂಟೆಗಳಲ್ಲಿ 435 ಡೆಂಗ್ಯೂ ಪ್ರಕರಣಗಳು ದಾಖಲಾಗಿದ್ದು ಈ ಬಗ್ಗೆ ಹೆಚ್ಚಿನ ಗಮನ ಕೊಡಬೇಕಾಗಿ ಹಾಗೂ ರಾಜ್ಯದಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣಗಳು ಮತ್ತು ಕೈಗೊಳ್ಳಬೇಕಾದ ಕ್ರಮಗಳ ಕುರಿತಂತೆ ಕರ್ನಾಟಕ ವಿಧಾನ ಪರಿಷತ್ ಶಾಸಕರಾದ ಟಿ. ಎ. ಶರವಣ ಅವರು ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಿದರು
ಇತ್ತೀಚಿಗೆ ರಾಜ್ಯದಲ್ಲಿ ಡೆಂಘ ಪ್ರಕರಣಗಳು ಉಲ್ಬಣಗೊಳ್ಳುತ್ತಿರುವುದು ಜನರಲ್ಲಿ ಭಯ ಹಟ್ಟುಸುತ್ತಿದೆ. ಮಳೆಗಾಲದಲ್ಲಿ ಸೊಳ್ಳೆಗಳ ಸಂಖ್ಯೆ ಹೆಚ್ಚುವುದರಿಂದ ಡೆಂಘ ಮಲೇರಿಯಾ ಚಿಕುನ್ ಗುನ್ಯ ರೋಗಗಳು ಜಾಸ್ತಿಯಾಗುತ್ತವೆ.
ಈ ರೋಗಗಳ ನಿಯಂತ್ರಣಕ್ಕೆ ಪ್ರತಿ ವರ್ಷ ಸರ್ಕಾರ ಕೋಟ್ಯಾಂತರ ರೂಪಾಯಿಗಳನ್ನು ಖರ್ಚು ಮಾಡುತ್ತಿದೆ. ಈ ಸಮೀಕ್ಷೆ ಮಾಡಲು ಪ್ರತಿ ಮಳೆಗಾಲದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಆಶಾ ಕಾರ್ಯಕರ್ತೆಯರನ್ನೊಳಗೊಂಡ ತಂಡ ರಚಿಸಿ ಸಮೀಕ್ಷೆ ನಡೆಸಲಾಗುತ್ತದೆ
ಈ ಸಂಬಂಧ ನಗರ ಪ್ರದೇಶಗಳಲ್ಲಿ ಪ್ರತಿ ತಿಂಗಳ ಮೊದಲ ಮತ್ತು ಮೂರನೇ ಶುಕ್ರವಾರ ಆರೋಗ್ಯ ನಿರೀಕ್ಷಣಾಧಿಕಾರಿಗಳು (HIO) ಮತ್ತು ಆರೋಗ್ಯ ಸುರಕ್ಷತಾಧಿಕಾರಿಗಳು (PHCO) ಲಾರ್ವಾ ಸಮೀಕ್ಷೆ ನಡೆಸುತ್ತಾರೆ.
ಮನೆಮನೆಗೆ ತೆರಳಿ ಸಮೀಕ್ಷೆ ಮಾಡಿ ಸೊಳ್ಳೆಗಳ ಉತ್ಪತ್ತಿ ತಾಣಗಳನ್ನು ನಾಶಪಡಿಸುವುದು ಈ ಸಮೀಕ್ಷೆಯ ಮೂಲ ಉದ್ದೇಶ. ಇವರಿಗೆ ಒಂದು ದಿನಕ್ಕೆ ತಲಾ ತಿಂಗಳಿಗೆ ರೂ.300/- ಗಳನ್ನು ಕೊಡಲಾಗುತ್ತಿದೆ. ಎಂದು ಹೇಳಿ ಕೊಳ್ಳುತ್ತಿರುವ ಆರೋಗ್ಯ ಇಲಾಖೆ ಅಧಿಕಾರಿಗಳು ಜಿಪಿಎಸ್ ಇಲ್ಲದ ಹಳೆಯ ಫೋಟೋಗಳನ್ನು ತೋರಿಸಿ ಸರ್ಕಾರಕ್ಕೆ ಕೋಟ್ಯಾಂತರ ರೂಪಾಯಿಗಳನ್ನು ಮೋಸ ಮಾಡುತ್ತಿದ್ದಾರೆ ಎಂದು ಟಿ. ಎ. ಶರವಣ ಅವರು ಹೇಳಿದರು.
ಇದು ನಾಗರಿಕರ ಆರೋಗ್ಯದ ಜೊತೆ ಚೆಲ್ಲಾಟ ನಡೆಸಿದಂತೆ, ಇಂತಹ ತಪ್ಪುಗಳು ಪುನರಾವರ್ತಿಸಿದಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು ಹಾಗೂ ತಪ್ಪುಗಳು ಪುನರಾವರ್ತಿಸಿದಲ್ಲಿ ಅಂತಹ ಅಧಿಕಾರಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಶರವಣ ಅವರು ಸರ್ಕಾರವನ್ನು ಒತ್ತಾಯಿಸಿದರು.