ಬೆಂಗಳೂರು: ಪದವಿ ಪೂರ್ವ ಕಾಲೇಜುಗಳಲ್ಲಿ ಒಟ್ಟಾರೆ 4259 ಉಪನ್ಯಾಸಕರ ಕೊರತೆ ಇದೆ. ಆದರೆ ಅವುಗಳಲ್ಲಿ ಈಗ 814 ಹುದ್ದೆ ಭರ್ತಿ ಮಾಡಲು ಸರ್ಕಾರವು ಅನುಮತಿ ನೀಡಿದೆ . 814 ಹುದ್ದೆ ಭರ್ತಿ ಮಾಡಲಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಸದನದಲ್ಲಿ ಮಾತನಾಡಿದ ಸಚಿವರು, 814 ಉಪನ್ಯಾಸಕರ ಹುದ್ದೆ ಭರ್ತಿ ಮಾಡಲು ಇಲಾಖೆ ಮುಂದಾಗಿದ್ದು, ಇದಕ್ಕಸರ್ಕಾರದ ಅನುಮತಿಯನ್ನು ಸಹ ನೀಡಲಾಗಿದೆ. ಸ್ನಾತಕೋತ್ತರ ಪದವಿ ಜತೆಗೆ, ಬಿ.ಇಡಿ ಪಾಸಾದವರು ಶಿಕ್ಷಕ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ.