ಭೋಪಾಲ್:- ಮಧ್ಯಪ್ರದೇಶದ ಜಬಲ್ಪುರ್ ರೈಲ್ವೆ ನಿಲ್ದಾಣದ ಹತ್ತಿರದಲ್ಲಿ ರೈಲಿನ ಎರಡು ಬೋಗಿಗಳು ಹಳಿ ತಪ್ಪಿರುವ ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇಂದೋರ್-ಜಬಲ್ಪುರ್ ಎಕ್ಸ್ಪ್ರೆಸ್ ರೈಲಿನ ಎರಡು ಬೋಗಿಗಳು ಹಳಿ ತಪ್ಪಿದ್ದು ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ವರದಿಯಾಗಿದೆ.
ಇಂದೋರ್ನಿಂದ ಹೊರಟ ರೈಲು ಜಬಲ್ಪುರ್ ರೈಲ್ವೆ ನಿಲ್ದಾಣದ 6ನೇ ಪ್ಲಾಟ್ಫಾರಂಗೆ ಬರಬೇಕಿತ್ತು. ಪ್ಲಾಟಫಾರಂನಿಂದ ಕೇವಲ 150 ಮೀಟರ್ ದೂರ ಇರುವಾಗಲೇ ರೈಲಿನ ಎರಡು ಬೋಗಿಗಳು ಹಳಿ ತಪ್ಪಿವೆ. ಘಟನೆಯಲ್ಲಿ ಯಾವುದೇ ಸಾವು ನೋವುಗಳು ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇಂದೋರ್ನಿಂದ ಇಂದೋರ್-ಜಬಲ್ಪುರ್ ಎಕ್ಸ್ಪ್ರೆಸ್ ರೈಲು ಬರುತ್ತಿತ್ತು. ಅದು ಜಬಲ್ಪುರದ ರೈಲ್ವೆ ನಿಲ್ದಾಣದ 6ನೇ ಪ್ಲಾಟ್ಫಾರಂಗೆ ಬರಬೇಕಿತ್ತು. ಜಬಲ್ಪುರ್ ರೈಲ್ವೆ ನಿಲ್ದಾಣದ ಹತ್ತಿರ ಬರುತ್ತಿದ್ದಂತೆ ರೈಲಿನ ವೇಗ ಕಡಿಮೆಯಾಗಿತ್ತು. ಆ ವೇಳೆಗಾಗಲೇ ರೈಲಿನ ಎರಡು ಬೋಗಿಗಳು ಹಳಿ ತಪ್ಪಿವೆ. ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ. ಎಲ್ಲ ಪ್ರಯಾಣಿಕರು ತಮ್ಮ ತಮ್ಮ ಮನೆಗೆ ಸುರಕ್ಷಿತವಾಗಿ ತೆರಳಿದ್ದಾರೆ ಎಂದು ಪಶ್ಚಿಮ ವಲಯದ ರೈಲ್ವೆ ಅಧಿಕಾರಿ ಹರ್ಷಿತಾ ಶ್ರೀವಾಸ್ತವ್ ಹೇಳಿದ್ದಾರೆ.
ಘಟನೆಗೆ ಕಾರಣ ಏನು ಎಂಬುದು ಇನ್ನು ತಿಳಿದು ಬಂದಿಲ್ಲ.