ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೊಸ್ಟ್ ಮಾಡಿದ ಮಹಿಳೆಯನ್ನು ಬೆಂಗಳೂರಲ್ಲಿ ಪೊಲೀಸರು ಬಂಧಿಸಿದ್ದಾರೆ. ಉಡುಪಿ ವಿಡಿಯೋ ವಿಚಾರವಾಗಿ ಸಿಎಂ ವಿರುದ್ದ ಟ್ವಿಟರ್ ಹಾಗೂ ಫೇಸ್ ಬುಕ್ ನಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದರು.
ವಿದ್ಯಾರ್ಥಿನಿಯರ ಮಕ್ಕಳಾಟವನ್ನ, ಬಿಜೆಪಿ ರಾಜಕೀಯ ಕಳ್ಳಾಟವನ್ನಾಗಿ ಬಳಸಿಕೊಳ್ಳುತ್ತಿದೆ ಎಂದು ಟ್ವೀಟ್ ಮಾಡಿದ ಬೆನ್ನಲ್ಲೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು ಆದರೆ ಇದನ್ನ ಬಿಜೆಪಿ ಕಾರ್ಯಕರ್ತೆ ಶಕುಂತಾಳ ಇದನ್ನ ಶೇರ್ ಮಾಡಿ ಇದನ್ನೆ ಸಿದ್ದರಾಮಯ್ಯ ಅವರ ಸೊಸೆ ಅಥವಾ ಹೆಂಡತಿಗೆ ಆಗಿದ್ರೆ ಹೀಗೆ ಹೇಳ್ತಿದ್ರಾ ಎಂದು ಪೋಸ್ಟ್ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಶಕುಂತಾಳ ವಿರುದ್ಧ ದೂರು ದಾಖಲಿಸಿ ಪೊಲೀಸರು ಬಂಧಿಸಿದ್ದಾರೆ.
![Demo](https://prajatvkannada.com/wp-content/uploads/2023/08/new-Aston-Band.jpeg)