ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಿಟ್ಲರ್, ಮುಸಲೋನಿಗೆ ಹೋಲಿಸಿ ಅವಹೇಳನ ಮಾಡುತ್ತಿರುವ ಬಗ್ಗೆ ಬಿಜೆಪಿ ಕಿಡಿ ಕಾರಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕ್ರಮ ಕೈಗೊಳ್ಳಬೇಕು, ಅವರನ್ನು ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಕೈಬಿಡಬೇಕು ಎಂದು ಒತ್ತಾಯಿಸಿ ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ಸಲ್ಲಿಸಿದೆ.
ಶಾಸಕ ಎಸ್, ಸುರೇಶ್ ಕುಮಾರ್ ಮತ್ತು ಬಿಜೆಪಿ ಕಾನೂನು ಪ್ರಕೋಷ್ಠದ ರಾಜ್ಯ ಘಟಕದ ಅಧ್ಯಕ್ಷ ವಿವೇಕ್ ಎಸ್ . ರೆಡ್ಡಿ ನೇತೃತ್ವದ ನಿಯೋಗ ರಾಜ್ಯದ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಅವರನ್ನು ಭೇಟಿ ಮಾಡಿ ದೂರು ಸಲ್ಲಿಸಿತು.