ಬರೋಬ್ಬರು ಮೂರು ವರ್ಷಗಳ ಬಳಿಕ ಧ್ರುವ ಸರ್ಜಾ ನಟನೆಯ ಮಾರ್ಟಿನ್ ಸಿನಿಮಾ ರಿಲೀಸ್ ಆಗಿದೆ. ಸಿನಿಮಾ ನೋಡಿದ ಪ್ರೇಕ್ಷಕರು ಧ್ರುವ ಸರ್ಜಾಗೆ ಹ್ಯಾಟ್ಸ್ ಆಫ್ ಹೇಳಿದ್ದಾರೆ. ಮಾರ್ಟಿನ್ ಸಿನಿಮಾದಲ್ಲಿ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಮೊಟ್ಟ ಮೊದಲ ಬಾರಿಗೆ ದ್ವಿಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸಿನಿಮಾ ರಿಲೀಸ್ ಆದ ಒಂದೇ ತಿಂಗಳಲ್ಲಿ ಒಟಿಟಿಗೆ ಬರಲು ಸಜ್ಜಾಗಿದೆ. ಎರಡು ದಿನಗಳ ಹಿಂದೆಯಷ್ಟೇ ‘ಮಾರ್ಟಿನ್’ ಸಕ್ಸಸ್ ವಿಚಾರಕ್ಕೆ ಧ್ರುವ ಸರ್ಜಾ ಚಿತ್ರತಂಡದೊಂದಿಗೆ ಕೇಕ್ ಕಟ್ ಮಾಡಿ ಸಂಭ್ರಮಿಸಿದ್ದರು. ಈ ಬೆನ್ನಲ್ಲೇ ಇದೀಗ ಒಟಿಟಿಗೆ ಮಾರ್ಟಿನ್ ಎಂಟ್ರಿಕೊಡಲು ಸಜ್ಜಾಗಿದೆ.
ಕರ್ನಾಟಕದಲ್ಲಿ 300ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿ ಬಾಕ್ಸ್ ಆಫೀಸ್ನಲ್ಲಿ 20 ಕೋಟಿಗೆ ಹೆಚ್ಚು ಕಲೆಕ್ಷನ್ ಮಾಡಿರುವ ‘ಮಾರ್ಟಿನ್’ ಇನ್ನು ಒಂದೇ ತಿಂಗಳಲ್ಲಿ ಒಟಿಟಿಗೆ ಬರಲಿದೆ. ಈ ಬಗ್ಗೆ ಧ್ರುವ ಸರ್ಜಾ ಆಪ್ತರೊಬ್ಬರು ಪ್ರತಿಕ್ರಿಯಿಸಿದ್ದಾರೆ. ಚಿತ್ರದ ಡಿಜಿಟಲ್ ರೈಟ್ಸ್ ಹಾಗೂ ಟಿವಿ ರೈಟ್ಸ್ ಬಗ್ಗೆ ಜೀ ನೆಟ್ವರ್ಕ್ ಜೊತೆ ಮಾತುಕತೆ ನಡೆಯುತ್ತಿದ್ದು, ಇನ್ನೂ ಸಿನಿಮಾ ಸೇಲ್ ಆಗಿಲ್ಲ. ಈ ವಿಚಾರವಾಗಿ ನಿರ್ಮಾಪಕ ಉದಯ್ ಕೆ.ಮೆಹ್ತಾ ಸದ್ಯ ಮುಂಬೈನಲ್ಲಿದ್ದಾರೆ ಬೀಡು ಬಿಟ್ಟಿದ್ದಾರೆ ಎಂದಿದ್ದಾರೆ.
ಔಟ್ ಆ್ಯಂಡ್ ಔಟ್ ಆ್ಯಕ್ಷನ್ ಸಿನಿಮಾ ಆಗಿರುವ ಮಾರ್ಟಿನ್ ಮಿಶ್ರ ಪ್ರತಿಕ್ರೆಯೆ ನಡುವೆಯೂ ಟಿವಿ ಹಾಗೂ ಡಿಜಿಟಲ್ ರೈಟ್ಸ್ ಡಿಮ್ಯಾಂಡ್ ಹೆಚ್ಚಿಸಿಕೊಂಡಿದೆ. ಧ್ರುವಗೆ ಜೋಡಿಯಾಗಿ ವೈಭವಿ ಶಾಂಡಿಲ್ಯಾ ನಟಿಸಿದ್ದು, ಅನ್ವೇಶಿ ಜೈನ್, ನಿಕಿತಿನ್ ಧೀರ್ ಸೇರಿದಂತೆ ದೊಡ್ಡ ತಾರಾಬಳಗವಿದೆ. ಬೆಂಗಳೂರು ಹಾಗೂ ಕಾಶ್ಮೀರದ ಸುಂದರ ತಾಣಗಳಲ್ಲಿ ಶೂಟಿಂಗ್ ಮಾಡಲಾಗಿದೆ.
ಕಾಶ್ಮೀರದ ಐಸ್ವಾರ್ ಸಾಹಸ ದೃಶ್ಯಗಳ ಜೊತೆಗೆ ರೋಮಾಂಚನಕಾರಿ ಸ್ಕೇಟಿಂಗ್ ಆ್ಯಕ್ಷನ್ ಸೀನ್ಗಳು ಸಿನಿಮಾ ಪ್ರೇಕ್ಷಕರಿಗೆ ಎಂಟರ್ಟೈನ್ ಮಾಡುತ್ತವೆ. ಕನ್ನಡದಲ್ಲಿ ಕೃಷ್ಣನ ಲವ್ ಸ್ಟೋರಿ, ಬಚ್ಚನ್, ಕೃಷ್ಣ ರುಕ್ಕು, ಬ್ರಹ್ಮಚಾರಿ ಅಂತಹ ಸಿನಿಮಾಗಳನ್ನು ಅದ್ಧೂರಿಯಾಗಿ ನಿರ್ಮಾಣ ಮಾಡಿರುವ ಉದಯ್ ಕೆ ಬಹುಕೋಟಿ ವೆಚ್ಚದಲ್ಲಿ ಮಾರ್ಟಿನ್ ಸಿನಿಮಾ ನಿರ್ಮಾಣ ಮಾಡಿದ್ದಾರೆ.