ರೇಣುಕಾಸ್ವಾಮಿ ಕೊಲೆ ನಡೆದು ಮೂರು ತಿಂಗಳ ಕಳೆದಿದ್ದು ಪೊಲೀಸರು ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಈ ಮಧ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕಷ್ಟು ಮಾಹಿತಿಗಳು ಹೊರ ಭೀಳುತ್ತಿದೆ.ರೇಣುಕಾಸ್ವಾಮಿ ಪವಿತ್ರಾ ಗೌಡಗೆ ಮಾತ್ರವಲ್ಲ ರಾಗಿಣಿ, ಶುಭ ಪೂಂಜಾಗೂ ಮೆಸೇಜ್ ಮಾಡಿದ್ದ ಎಂದು ಜಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ. ಈ ಬಗ್ಗೆ ನಟಿ ಶುಭ ಪೂಂಜಾ ಪ್ರತಿಕ್ರಿಯೆ ನೀಡಿದ್ದಾರೆ.
ನನ್ನ ಎಲ್ಲಾ ಮಾಧ್ಯಮ ಮಿತ್ರರೇ ಬೆಳಗ್ಗೆಯಿಂದ ರೇಣುಕಾಸ್ವಾಮಿ ಪ್ರಕರಣದ ಕುರಿತು ನನಗೆ ಕರೆ ಮಾಡುತ್ತಿದ್ದೀರಾ, ಅದಕ್ಕೆಲ್ಲಾ ನಾನು ಸ್ಪಷ್ಟನೆ ನೀಡಲು ಬಯಸುತ್ತೇನೆ. ನನ್ನ ವೈಯಕ್ತಿಕ ಖಾತೆಯಲ್ಲಿ ಅಂತಹ ಯಾವುದೇ ಮೆಸೇಜ್ಗಳು ಬಂದಿಲ್ಲ ಎಂದು ನಟಿ ಸ್ಪಷ್ಟನೆ ನೀಡಿದ್ದಾರೆ.
ಕನ್ನಡದ ಹೆಸರಾಂತ ನಟಿಯರಾದ ರಾಗಿಣಿ ದ್ವಿವೇದಿ, ಶುಭಾ ಪೂಂಜಾ ಸೇರಿದಂತೆ ಅನೇಕ ನಟಿಯರಿಗೆ ರೇಣುಕಾಸ್ವಾಮಿ ತನ್ನ ನಕಲಿ ಅಕೌಂಟ್ ನಿಂದ ಅಶ್ಲೀಲ ಸಂದೇಶ ಕಳುಹಿಸಿದ್ದನಂತೆ. ಪೊಲೀಸರ ವಿಚಾರಣೆ ವೇಳೆಯಲ್ಲಿ ಇಬ್ಬರು ಆರೋಪಿಗಳು ಒಪ್ಪಿಕೊಂಡಿದ್ದಾರೆ. ಪ್ರದೋಶ್ ಮತ್ತು ವಿನಯ್ ನೀಡಿರುವ ಹೇಳಿಕೆಯಲ್ಲಿ ರೇಣುಕಾಸ್ವಾಮಿ ಈ ನಟಿಯರಿಗೆ ಮಾತ್ರವಲ್ಲ, ಇನ್ನೂ ಹಲವು ನಟಿಯರಿಗೆ ಮೆಸೇಜ್ ಕಳುಹಿಸಿದ್ದ ಅನ್ನೋ ಮಾತು ಉಲ್ಲೇಖವಾಗಿದೆ. ರೇಣುಕಾಸ್ವಾಮಿ ಮೊಬೈಲ್ ನಲ್ಲಿ ನಾವು ರಾಗಿಣಿ, ಶುಭಾ ಪೂಂಜಾ ಸೇರಿದಂತೆ ಅನೇಕ ನಟಿಯರಿಗೆ ರೇಣುಕಾಸ್ವಾಮಿ ಅಶ್ಲೀಲ ಮಸೇಜ್ ಕಳುಹಿಸಿದ್ದನ್ನು ನಾವು ನೋಡಿದ್ದೇವೆ ಎಂದು ಪೊಲೀಸರಿಗೆ ಆರೋಪಿಗಳು ಹೇಳಿದ್ದಾರೆ. ಅವರ ಮಾತುಗಳನ್ನು ಚಾರ್ಜ್ಶೀಟ್ನಲ್ಲೂ ದಾಖಲಿಸಲಾಗಿದೆ.