ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಂಡಿರುವ ಕನ್ನಡದ ನಿರ್ದೇಶಕ ಪ್ರಶಾಂತ್ ನೀಲ್ ಇತ್ತೀಚೆಗೆ ತೆಲುಗು ಸ್ಟಾರ್ ನಟ ವಿಜಯ್ ದೇವರಕೊಂಡ ಅವರನ್ನು ಭೇಟಿ ಮಾಡಿದ್ದಾರೆ. ಈ ಭೇಟಿ ವಿಜಯ್ ನಿವಾಸದಲ್ಲಿ ನಡೆದಿದ್ದು, ಭೇಟಿಯ ಬಳಿಕ ಅಭಿಮಾನಿಗಳ ವಲಯದಲ್ಲಿ ಕುತೂಹಲ ಮೂಡಿಸಿದೆ.
ಚಿತ್ರರಂಗದಲ್ಲಿ ಯಾರೂ ಕೂಡ ಕಾರಣ ಇಲ್ಲದೇ ಒಬ್ಬರನ್ನೊಬ್ಬರು ಭೇಟಿ ಆಗುವುದಿಲ್ಲ. ಈಗ ಪ್ರಶಾಂತ್ ನೀಲ್ ಹಾಗೂ ವಿಜಯ್ ದೇವರಕೊಂಡ ನಡುವಿನ ಭೇಟಿಯ ಹಿಂದೆ ಇರುವ ಉದ್ದೇಶ ಏನು ಎಂಬ ಪ್ರಶ್ನೆ ಮೂಡಿದೆ.
ಅಂದುಕೊಂಡಂತೆ ಆಗಿದ್ದರೆ ಸಲಾರ್ 2 ಸಿನಿಮಾ ಶುರುವಾಗಬೇಕಿತ್ತು. ಇದಾದ ನಂತರ ಜ್ಯೂನಿಯರ್ ಎನ್.ಟಿ.ಆರ್ ಅವರಿಗೆ ಪ್ರಶಾಂತ್ ಸಿನಿಮಾವೊಂದನ್ನು ನಿರ್ದೇಶನ ಮಾಡಬೇಕಿದೆ. ಇವೆರಡೂ ಸಿನಿಮಾ ಸದ್ಯಕ್ಕೆ ಸಾಧ್ಯವಿಲ್ಲ ಎನ್ನುವ ಸುದ್ದಿ ಹರಿದಾಡುತ್ತಿದೆ. ಪ್ರಭಾಸ್ ಮತ್ತು ಜ್ಯೂನಿಯರ್ ಎನ್.ಟಿ.ಆರ್ ಬ್ಯಾಕ್ ಟು ಬ್ಯಾಕ್ ಸಿನಿಮಾ ಒಪ್ಪಿಕೊಂಡಿದ್ದರಿಂದ ವಿಜಯ್ ಭೇಟಿ ಕುತೂಹಲ ಮೂಡಿಸಿದೆ.
ಹಲವು ಸಾಧ್ಯತೆಗಳ ಬಗ್ಗೆ ನೆಟ್ಟಿಗರು ಊಹಿಸುತ್ತಿದ್ದಾರೆ. ‘ಸಲಾರ್ 2’ ಸಿನಿಮಾದಲ್ಲಿ ಅಥವಾ ಜೂನಿಯರ್ ಎನ್ಟಿಆರ್ ಜೊತೆಗಿನ ಸಿನಿಮಾದಲ್ಲಿ ವಿಜಯ್ ದೇವರಕೊಂಡ ಅವರಿಗೂ ಒಂದು ಪ್ರಮುಖ ಪಾತ್ರ ಇದ್ದರಬಹುದಾ? ಅದರ ಬಗ್ಗೆ ಚರ್ಚೆ ಮಾಡುವ ಸಲುವಾಗಿಯೇ ಪ್ರಶಾಂತ್ ನೀಲ್ ಮತ್ತು ವಿಜಯ್ ದೇವರಕೊಂಡ ಭೇಟಿ ಆಗಿರಬಹುದಾ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ.