PrajatvkannadaPrajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

ಭಾರತೀಯ ಹೈಕಮಿಷನ್‌ ಕಚೇರಿಗೆ ಭದ್ರತೆ ಒದಗಿಸಿದ ಬ್ರಿಟನ್‌ ಸರ್ಕಾರ

March 23, 2023

ಭಾರತೀಯ ಅಮೆರಿಕನ್ ನಟಿಗೆ ರಾಷ್ಟ್ರೀಯ ಪದಕ ನೀಡಿದ ಬೈಡನ್

March 23, 2023

ಅಧ್ಯಕ್ಷ ಪುಟಿನ್ ಟೀಕಿಸಿ ಹಾಡಿದ್ದ ರಷ್ಯಾದ ಪಾಪ್ ತಾರೆ ಸಾವು

March 23, 2023
Facebook Twitter Instagram
Thursday, March 23
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
PrajatvkannadaPrajatvkannada
Home » RCB, MI, Delhi ಅಭಿಮಾನಿಗಳಿಗೆ ನಿರಾಸೆ – 2023ರ ಐಪಿಎಲ್‌ನಿಂದ ಈ ಸ್ಟಾರ್ ಆಟಗಾರರು ಔಟ್
ಕ್ರೀಡೆ Prajatv KannadaBy Prajatv KannadaFebruary 28, 2023

RCB, MI, Delhi ಅಭಿಮಾನಿಗಳಿಗೆ ನಿರಾಸೆ – 2023ರ ಐಪಿಎಲ್‌ನಿಂದ ಈ ಸ್ಟಾರ್ ಆಟಗಾರರು ಔಟ್

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ಮುಂಬೈ: ಭೀಕರ ಕಾರು ಅಪಘಾತದಿಂದ ಗಾಯಗೊಂಡಿದ್ದ ಟೀಂ ಇಂಡಿಯಾ ಸ್ಟಾರ್ ಕ್ರಿಕೆಟಿಗ ರಿಷಬ್ (Rishabh Pant) ಪಂತ್ ಹಾಗೂ ಯಾರ್ಕರ್ ಸ್ಪೆಷಲಿಸ್ಟ್ ಜಸ್‌ಪ್ರೀತ್ ಬುಮ್ರಾ (Jasprit Bumrah) ಸೇರಿದಂತೆ ಹಲವು ಸ್ಟಾರ್ ಆಟಗಾರರು 2023ರ 16ನೇ ಆವೃತ್ತಿ ಐಪಿಎಲ್‌ನಿಂದ (IPL 2023) ಹೊರಗುಳಿದಿದ್ದಾರೆ. ಇದರಿಂದ ನೆಚ್ಚಿನ ತಂಡದ ಅಭಿಮಾನಿಗಳಿಗೆ ನಿರಾಸೆಯುಂಟಾಗಿದೆ.

ಯಾರೆಲ್ಲಾ ಐಪಿಎಲ್‌ನಿಂದ ಮಿಸ್ಸಿಂಗ್?:
ರಿಷಬ್ ಪಂತ್: 2022ರ ಡಿಸೆಂಬರ್ 30ರಂದು ಟೀಂ ಇಂಡಿಯಾ (Team India) ಆಟಗಾರ ರಿಷಬ್ ಪಂತ್ ಅವರು ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿತ್ತು. ದೆಹಲಿಯಿಂದ ಉತ್ತರಾಖಂಡದಲ್ಲಿರುವ ತಮ್ಮ ನಿವಾಸಕ್ಕೆ ತೆರಳುತ್ತಿದ್ದಾಗ ಹಮ್ಮದ್‌ಪುರ ಝಾಲ್ ಬಳಿ ರೂರ್ಕಿಯ ನರ್ಸನ್ ಗಡಿಯಲ್ಲಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು, ಪಂತ್ ಗಂಭೀರವಾಗಿ ಗಾಯಗೊಂಡಿದ್ದರು. ರಿಷಬ್ ಪಂತ್ ಅವರ ತಲೆ (ಹಣೆಯ ಭಾಗ), ಕಾಲಿಗೆ ಗಂಭೀರ ಪೆಟ್ಟಾಗಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಇದೀಗ ಅವರು ಆರೋಗ್ಯದಲ್ಲಿ ಚೇತರಿಸಿಕೊಳ್ಳುತ್ತಿರುವುದರಿಂದ ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಅವರು ಗೈರಾಗಲಿದ್ದಾರೆ. ಆಸ್ಟ್ರೇಲಿಯಾ ಕ್ರಿಕೆಟಗ ಡೇವಿಡ್ ವಾರ್ನರ್ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕತ್ವ ವಹಿಸಿಕೊಳ್ಳುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.

 

ಜಸ್‌ಪ್ರೀತ್‌ ಬುಮ್ರಾ:
ಬೆನ್ನು ನೋವಿನ ಸಮಸ್ಯೆಯಿಂದ ಈಗಷ್ಟೇ ಗುಣಮುಖರಾಗುತ್ತಿರುವ ಭಾರತ ತಂಡದ ವೇಗಿ ಜಸ್‌ಪ್ರೀತ್ ಬುಮ್ರಾ ಅವರು ಮುಂಬರುವ 2023ರ ಐಪಿಎಲ್ ಟೂರ್ನಿ ಹಾಗೂ 2ನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್ ಫೈನಲ್‌ನಿಂದ ಬಹುತೇಕ ಹೊರ ಬಿದ್ದಿದ್ದಾರೆ. ಕಳೆದ ವರ್ಷ ಸೆಪ್ಟೆಂಬರ್ ತಿಂಗಳಿನಲ್ಲಿ ಗಾಯಕ್ಕೆ ತುತ್ತಾಗಿದ್ದ ಜಸ್‌ಪ್ರೀತ್ ಬುಮ್ರಾ ಅವರು ನಿಗದಿತ ಸಮಯಕ್ಕೆ ಗುಣಮಖರಾಗುವಲ್ಲಿ ವಿಫಲರಾದರು. ಫೆಬ್ರವರಿ 16ರಂದು ಬುಮ್ರಾ ತಮ್ಮ ಫಿಟ್ನೆಸ್ ಸಾಬೀತುಪಡಿಸುವಲ್ಲಿ ವಿಫಲರಾದರು. ಆದ್ದರಿಂದ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್ ಫೈನಲ್ ಪಂದ್ಯದಿಂದಲೂ ಅವರು ಹೊರಗುಳಿಯಲಿದ್ದಾರೆ. ಜೊತೆಗೆ ಕಳೆದ ಹಲವು ವರ್ಷಗಳಿಂದ ಮುಂಬೈ ಫ್ರಾಂಚೈಸಿ ಜಸ್‌ಪ್ರೀತ್‌ ಬುಮ್ರಾ ಅವರ ಮೇಲೆ ಸಾಕಷ್ಟು ಅವಲಂಬಿಸಿದ್ದು, ಫ್ರಾಂಚೈಸಿಗೂ ಅಲಭ್ಯತೆಯ ಆತಂಕ ಎದುರಾಗಿದೆ.

ಪ್ಯಾಟ್ ಕಮ್ಮಿನ್ಸ್:
ಕೋಲ್ಕತ್ತಾ ನೈಟ್‌ರೈಡರ್ಸ್ (KKR) ಪ್ರಮುಖ ಆಟಗಾರನಾಗಿದ್ದ ಆಸ್ಟ್ರೇಲಿಯಾ ಕ್ರಿಕೆಟಿಗ ಪ್ಯಾಟ್ ಕಮ್ಮಿನ್ಸ್ ಸಹ 16ನೇ ಐಪಿಎಲ್ ಆವೃತ್ತಿಯಿಂದ ಹೊರಗುಳಿಯುತ್ತಿದ್ದಾರೆ. ತಮ್ಮ ತಾಯಿಯನ್ನು ನೋಡಿಕೊಳ್ಳುವ ಉದ್ದೇಶದಿಂದ ಅವರು ಸಿಡ್ನಿಗೆ ಮರಳಿದ್ದಾರೆ.

ಮಿಚೆಲ್ ಸ್ಟಾರ್ಕ್, ಸ್ಟೀವನ್ ಸ್ಮಿತ್:
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಮಾಜಿ ವೇಗಿ ಮಿಚೆಲ್ ಸ್ಟಾರ್ಕ್ ಹಾಗೂ ಆಸ್ಟ್ರೇಲಿಯಾದ (Australia) ಸ್ಟಾರ್ ಆಟಗಾರ ಸ್ಟೀವನ್ ಸ್ಮಿತ್ 2023ರ ಐಪಿಎಲ್ ಹರಾಜಿಗೆ ನೋಂದಣಿ ಮಾಡಿಕೊಳ್ಳದ ಕಾರಣ ಅವರು ಈ ಬಾರಿ ಐಪಿಎಲ್‌ನಿಂದ ಹೊರಗುಳಿಯಲಿದ್ದಾರೆ. ಕೈಬೆರಳು ಗಾಯದ ಸಮಸ್ಯೆಯಿಂದ ಚೇತರಿಸಿಕೊಳ್ಳುತ್ತಿರುವ ಸ್ಟಾರ್ಕ್ ಭಾರತದ ವಿರುದ್ಧ 3 ಮತ್ತು 4ನೇ ಟೆಸ್ಟ್ ಪಂದ್ಯಗಳಲ್ಲಿ ಆಡುವ ಸಾಧ್ಯತೆ ಇದೆ. ಆದ್ರೆ ಸ್ಟೀವನ್ ಸ್ಮಿತ್ ತಾವೇ ಈ ಬಾರಿ ಟಿ20 ಲೀಗ್‌ನಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅಲೆಕ್ಸ್ ಹೇಲ್ಸ್:
ಇಂಗ್ಲೆಂಡ್ ತಂಡದ ಆರಂಭಿಕ ಆಟಗಾರ ಅಲೆಕ್ಸ್ ಹೇಲ್ಸ್ ವೈಯಕ್ತಿಕ ಕೆಲಸದ ಒತ್ತಡಗಳಿಂದ 16ನೇ ಆವೃತ್ತಿ ಐಪಿಎಲ್‌ನಿಂದ ಹೊರಗುಳಿಯುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಹೇಲ್ಸ್ 2022ರ ಟಿ20 ವಿಶ್ವಕಪ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ, ತಂಡದ ಗೆಲುವಿಗೆ ಕಾರಣವಾಗಿದ್ದರು.

 

Share. Facebook Twitter WhatsApp Pinterest LinkedIn Tumblr Telegram Email

Related Posts

WPL 2023: ಡೆಲ್ಲಿ ಕ್ಯಾಪಿಟಲ್ಸ್‌ಗೆ 5 ವಿಕೆಟ್‌ ಜಯ – ಫೈನಲ್‌ಗೆ ಗ್ರ್ಯಾಂಡ್‌ ಎಂಟ್ರಿ

March 22, 2023

Aisa Cup 2023: ಏಷ್ಯಾಕಪ್ ಆಡಲು ಪಾಕಿಸ್ತಾನಕ್ಕೆ ಕಳುಹಿಸಿಕೊಡಿ: ಪ್ರಧಾನಿ ಮೋದಿ ಬಳಿ ಮನವಿ ಮಾಡಿಕೊಂಡ ಶಾಹಿದ್ ಅಫ್ರಿದಿ

March 22, 2023

IND vs AUS: 3ನೇ ಒಡಿಐನಲ್ಲಿ ಸ್ಟ್ರಾಂಗ್ ಬ್ಯಾಟ್ಸ್ ಮನ್ ಔಟ್: ಆ ಜಾಗಕ್ಕೆ ಬರುವರು ಯಾರು..?

March 22, 2023

ರೋಚಕ ಜಯದೊಂದಿಗೆ ಗುಜರಾತ್ ಜೈಂಟ್ಸ್, RCBಗೆ ಗೇಟ್‌ ಪಾಸ್‌ ಕೊಟ್ಟ ಯು.ಪಿ ವಾರಿಯರ್ಸ್‌!

March 21, 2023

ಈ ಬಾರಿ ಸಿಎಸ್‌ಕೆ ಕಪ್ ಗೆಲ್ಲಲ್ಲ, ಆರ್‌ಸಿಬಿ ಗೆದ್ರೆ ಖುಷಿ – ಈ ರೀತಿ ಭವಿಷ್ಯ ಹೇಳಿದ್ಯಾರು?

March 20, 2023

RCB ತಂಡಕ್ಕೆ ಆನೆ ಬಲ – ವಿಲ್‌ ಜಾಕ್ಸ್‌ ಬದಲಿಗೆ ಕಿವೀಸ್‌ ಆಲ್‌ರೌಂಡರ್‌ ಎಂಟ್ರಿ

March 20, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.