ಕೋಲಾರ ಜಿಲ್ಲೆಯ ಪ್ರಗತಿ ಪರಿಶೀಲನೆ ಸಭೆಗೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಮಂತ್ರಿಗಳಾದ ಬೈರತಿ ಸುರೇಶ್ ರವರಿಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಶಾಖೆ ವತಿಯಿಂದ ದಲಿತರ ಹಲವಾರು ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಮನವಿ ನೀಡಲಾಯಿತು.
ಈ ಸಂದರ್ಭದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕರಾದ ನಾಗನಾಳ ಮುನಿಯಪ್ಪ ಮಾತನಾಡಿ ಜಿಲ್ಲಾಧಿಕಾರಿಗಳು ಜಿಲ್ಲೆಗೆ ಬಂದಾಗಿನಿಂದ ಒಂದು ಕಡೆ ದಲಿತರನ್ನ ಸೇರಿಸಿ ನಮ್ಮ ಸಮಸ್ಯೆಗಳನ್ನ ಆಲಿಸಿಲ್ಲ ಮತ್ತು ಜಿಲ್ಲಾಧಿಕಾರಿಗಳ ಕಚೇರಿಗೆ ಹೋದಾಗ ಸರಿಯಾಗಿ ಸ್ಪಂದಿಸಿಲ್ಲ ಈ ಕಾರಣಕ್ಕಾಗಿ ಯಾವುದೇ ಸಮಸ್ಯೆ ಬಗೆ ಬಗೆಹರೆದಿಲ್ಲ ಎಂದು ಉಸ್ತುವಾರಿ ಮಂತ್ರಿಗಳ ಗಮನಕ್ಕೆ ತಂದರು.
ಮನವಿಗೆ ಸ್ಪಂದಿಸಿದ ಜಿಲ್ಲಾ ಉಸುವಾರಿ ಸಚಿವರು ಕೂಡಲೇ ಜಿಲ್ಲಾಧಿಕಾರಿಗಳನ್ನು ಕರೆಸಿ, ಎಲ್ಲಾ ದಲಿತ ಸಂಘಟನೆಗಳ ಸಭೆಯನ್ನ ಕರೆದು ಅವರ ಸಮಸ್ಯೆಗಳನ್ನು ಆಲಿಸಲು ಸೂಚನೆ ನೀಡಿದರು. ಆದಷ್ಟು ಬೇಗ ಸಭೆ ಏರ್ಪಡಿಸಿ ಸರ್ವೆ ನಂಬರ್ ಗಳನ್ನು ಗುರುತಿಸಿ ಅದರಲ್ಲೂ ದಲಿತರ ಜಮೀನುಗಳ ಪೋಡಿಯನ್ನು ಬೇಗನೆ ಮಾಡಲು ಸೂಚಿಸಿದರು ಹಾಗೂ ಜಿಲ್ಲೆಯಾದ್ಯಂತ ಸರ್ಕಾರಿ ಗೋಮಾಳ ಎಷ್ಟಿದೆ ಎಂಬುದು ಸಾರ್ವಜನಿಕವಾಗಿ ಪ್ರಕಟಿಸಲು ಮತ್ತು ಶಾಸಕರ ನೇತೃತ್ವದಲ್ಲಿ ದರಕಾಸ್ತು ಸಮಿತಿಗಳ ಮುಖಾಂತರ ಜಮೀನು ಮಂಜೂರಾತಿ ಮಾಡಲು ನಿಗಾ ವಹಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.