ಬೆಂಗಳೂರು: ಪದ್ಮನಾಭನಗರದಿಂದ ಸಂಸದ ಡಿಕೆ ಸುರೇಶ್ ಕಣಕ್ಕಿಳಿಯಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಹೈಕಮಾಂಡ್ ಸೂಚನೆ ಮೇರೆಗೆ ಕೊನೇ ಕ್ಷಣದಲ್ಲಿ ಪದ್ಮನಾಭನಗರದ ಅಭ್ಯರ್ಥಿ ಬದಲಾವಣೆ ಆಗಿದ್ದು, ಡಿ.ಕೆ.ಸುರೇಶ್ ಕಣಕ್ಕಿಳಿಯಲಿದ್ದಾರೆ ಎಂದರು. ಈ ಹಿನ್ನೆಲೆಯಲ್ಲಿ ಇಂದು ಡಿ.ಕೆ.ಸುರೇಶ್ ಪದ್ಮನಾಭನಗರದಿಂದ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ತಿಳಿಸಿದರು.
ಕನಕಪುರದಲ್ಲಿ ಡಿ.ಕೆ.ಶಿವಕುಮಾರ್ ವಿರುದ್ಧ ಬಿಜೆಪಿ ಸಚಿವ ಆರ್.ಅಶೋಕ್ ಅವರನ್ನು ಕಣಕ್ಕಿಳಿಸಿರುವ ಹಿನ್ನೆಲೆಯಲ್ಲಿ ಆರ್.ಅಶೋಕ್ ಅವರ ಸ್ವ ಕ್ಷೇತ್ರದಲ್ಲೇ ಅವರನ್ನು ಕಟ್ಟಿಹಾಕುವ ನಿಟ್ಟಿನಲ್ಲಿ ಕಾಂಗ್ರೆಸ್ ರಣತಂತ್ರ ರೂಪಿಸಿದ್ದು, ಡಿ.ಕೆ.ಸುರೇಶ್ ಅವರನ್ನು ಅಖಾಡಕ್ಕಿಳಿಸಿದೆ. ಇನ್ನೂ ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಸಚಿವ ಆರ್.ಅಶೋಕ್ ಕ್ಷೇತ್ರ ಪದ್ಮನಾಭನಗರ ಹೈವೋಲ್ಟೇಜ್ ಅಖಾಡವಾಗಿ ಮಾರ್ಪಟ್ಟಿದೆ. ಆರ್. ಅಶೋಕ್ ವಿರುದ್ಧ ಇದೀಗ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಅವರನ್ನು ಕಣಕ್ಕಿಳಿಸುತ್ತಿದೆ.