ಹೆಚ್ಚುವರಿ ಅಕ್ಕಿ ಪೂರೈಸಲು ಕೇಂದ್ರ ಸರ್ಕಾರ ನಿರಾಕರಣೆ ವಿಚಾರಕ್ಕೆ ಸಂಬಂಧಿಸಿ ನಾವು ಉಚಿತವಾಗಿ ಅಕ್ಕಿ ಕೊಡಿ ಎಂದು ಕೇಂದ್ರ ಸರ್ಕಾರಕ್ಕೆ ಕೇಳ್ತಿಲ್ಲ. ಕೇಂದ್ರದ ದರ ಏನಿದೆ ಆ ಪ್ರಕಾರ ಅಕ್ಕಿ ಕೊಡಿ ಎಂದು ಕೇಳ್ತಿದ್ದೇವೆ. ಕೇಂದ್ರ ಸರ್ಕಾರದ ಬಳಿ ಸಾಕಷ್ಟು ಪ್ರಮಾಣದ ಅಕ್ಕಿ ದಾಸ್ತಾನು ಇದೆ. ಕೇಂದ್ರ ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳುವುದು ಸರಿಯಲ್ಲ. ಬಡವರು,
ಸಾಮಾನ್ಯ ಜನರ ಆರ್ಥಿಕ ಹೊರೆ ಕಡಿಮೆ ಮಾಡಬೇಕು. ಆ ನಿಟ್ಟಿನಲ್ಲಿ ಹೆಚ್ಚುವರಿವಾಗಿ 5 ಕೆಜಿ ಅಕ್ಕಿ ಕೊಡುತ್ತೇವೆ ಎಂದಿದ್ದೇವೆ. ಕಾಂಗ್ರೆಸ್ಗೆ ಮತ ಹಾಕಿದವರಿಗೂ ಉಚಿತವಾಗಿ ಅಕ್ಕಿ ಸಿಗಲಿದೆ. ಬಿಜೆಪಿ ಹಾಗೂ ಜೆಡಿಎಸ್ಗೆ ಮತ ಹಾಕಿದವರಿಗೂ ಅಕ್ಕಿ ಸಿಗುತ್ತೆ. ಕೇಂದ್ರ ಸರ್ಕಾರ ಬಡವರಿಗೆ ಅನ್ಯಾಯ ಮಾಡುವುದು ಸರಿಯಲ್ಲ. ಅಕ್ಕಿ ವಿತರಣೆ ವಿಚಾರದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ ಎಂದು ಸಂಸದ ಡಿಕೆ ಸುರೇಶ್ ಆಕ್ರೋಶ ಹೊರ ಹಾಕಿದ್ರು.