ದೆಹಲಿ: ಸುಪ್ರೀಂಕೋರ್ಟ್ ಹಿರಿಯ ವಕೀಲರಾದ ಮುಕುಲ್ ರೋಹಟಗಿ ಅವರನ್ನು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನವದೆಹಲಿಯಲ್ಲಿ ಭೇಟಿಯಾಗಿದ್ದಾರೆ.
ಮುಕುಲ್ ರೋಹಟಗಿ ಈ ಹಿಂದೆ ಇಡಿ, ಸಿಬಿಐ ಕೇಸ್ಗಳಿಗೆ ಸಂಬಂಧಪಟ್ಟಂತೆ ಡಿಕೆ ಶಿವಕುಮಾರ್ ಪರವಾಗಿ ವಾದಿಸಿದ್ದಾರೆ. ಭೇಟಿಯ ಸಂದರ್ಭದಲ್ಲಿ ಅವರ ವಿರುದ್ಧ ನಡೆಯುತ್ತಿರುವ ಪ್ರಕರಣಗಳ ಪ್ರಸ್ತುತ ಬೆಳವಣಿಗೆಗಳ ಕುರಿತು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ
ಬುಧವಾರ ರಾತ್ರಿ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿದ್ದು, ವರಿಷ್ಠರನ್ನು ಭೇಟಿಯಾಗಿದ್ದಾರೆ. ಈ ಸಂದರ್ಭ ಪರಿಷತ್ ಸದಸ್ಯರ ಆಯ್ಕೆ, ನಿಗಮ ಮಂಡಳಿ ನೇಮಕ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.
ದೆಹಲಿಯಲ್ಲಿ ಮುಕುಲ್ ರೋಹಟಗಿ, ಜಲ ಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಭೇಟಿ ಮಾಡಿ ಚರ್ಚಿಸಿದ ಡಿಸಿಎಂ ಡಿಕೆಶಿ
ನವದೆಹಲಿಯಲ್ಲಿ ಜಲ ಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಡಿಸಿಎಂ ಡಿ.ಕೆ. ಶಿವಕುಮಾರ್ ಭೇಟಿಯಾಗಿ ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳ ಜಾರಿ ಹಾಗೂ ಕಾಮಗಾರಿಗಳ ಪ್ರಗತಿ ಕುರಿತು ಚರ್ಚಿಸಿದ್ದಾರೆ.