ಬೆಂಗಳೂರು: ವಿಧಾನಸೌಧದ ಮುಂಭಾಗದಲ್ಲಿರುವ ಕೆಂಪೇಗೌಡ ಪ್ರತಿಮೆಗೆ ಡಿಸಿಎಂ ಡಿಕೆಶಿವಕುಮಾರ್ ಮಾಲಾರ್ಪಣೆ ಮಾಡಿದ್ದಾರೆ. ಈ ವೇಳೆ ಯಲಹಂಕ ಶಾಸಕ ಎಸ್ ಆರ್ ವಿಶ್ವನಾಥ್, ಸಚಿವ ಕೃಷ್ಣ ಭೈರೇಗೌಡ ಸಾಥ್ ನೀಡಿದರು.
ಸದಾಶಿವನಗರದ ರಮಣಮಹರ್ಷಿ ಉದ್ಯಾನವನದಲ್ಲಿ ನಡೆದ 514ನೇ ಕೆಂಪೇಗೌಡ ಜಯಂತಿ ಆಚರಣೆ ವೇಳೆ ರಾಜಕೀಯ ವೈರಿಗಳಾದ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಮಾಜಿ ಡಿಸಿಎಂ ಡಾ.ಅಶ್ವತ್ಥ್ ನಾರಾಯಣ ಅವರು ಕೆಂಪೇಗೌಡ ಜಯಂತಿ ಆಚರಣೆ ವೇಳೆ ಮುಖಾಮುಖಿಯಾದರು.
ಈ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಉಪಸ್ಥಿತಿ ಇದ್ದು ಅವರು ಕೂಡ ಇಬ್ಬರು ನಾಯಕರಿಗೆ ಪರಸ್ಪರ ಕಚ್ಚಾಡದಂತೆ ಬುದ್ಧಿಮಾತು ಕೂಡ ಹೇಳಿದರು.