ಬೆಂಗಳೂರು: ಕರ್ನಾಟಕದ ಉಪಮುಖ್ಯ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ಇಂದು ಪ್ರಮಾಣ ವಚನ ಸ್ವೀಕರ ಮಾಡಿದರು. ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿಯನ್ನು ಭೋದಿಸಿದರು. ಇದೇ ವೇಳೆ ಡಿಕೆ ಶಿವಕುಮಾರ್ ಅವರು ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದರು.
ಪ್ರಮಾಣ ವಚನ ಸಮಾರಂಭಕ್ಕೆ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ತಮಿಳುನಾಡು ಸಿಎಂ ಮಾಜಿ ಸಂಸದೆ ರಮ್ಯ, ಸೇರಿದಂತೆ ಕಾಂಗ್ರೆಸ್ ಶಾಸಕರು, ಸಾವಿರಾರು ಜನತೆ ಆಗಮಿಸಿದ್ದರು. ನಟ, ರಾಜಕಾರಣಿ ಕಮಲ್ ಹಾಸನ್ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್, ಬಿಹಾರ ಸಿಎಂ ನಿತೀಶ್ ಕುಮಾರ್, ಚತ್ತೀಸ್ಗಢ ಸಿಎಂ ಭೂಪೇಶ್ ಬಫೇಲ್, ಹಿಮಾಚಲ ಪ್ರದೇಶ ಸಿಎಂ ಸುಖೀಂದರ್ ಸಿಂಗ್, ಪುದುಚೇರಿ ಸಿಎಂ ರಂಗಸ್ವಾಮಿ, ಜಾರ್ಖಂಡ್ ಸಿಎಂ ಹೇಮಂತ್ ಸೋರೆನ್ ಹಾಜರಿದ್ದರು. ಇನ್ನೂ ಸಮಾರಂಭ ಮುಗಿದ ಬಳಿಕ ಕ್ಯಾಬಿನೆಟ್ ಸಭೆ ನಡೆಯಲಿದ್ದು, ಸಭೆಯಲ್ಲಿ ಎಲ್ಲಾ ಐದು ಗ್ಯಾರಂಟಿಗಳ ಬಗ್ಗೆ ಘೋಷಣೆ ಮಾಡಲಾಗುವುದು ಎನ್ನಲಾಗಿದೆ.