PrajatvkannadaPrajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

ಓಲಾ ಶೇರಿಂಗ್, ಉಬರ್ ಪೂಲಿಂಗ್‌ʼಗೆ ಅವಕಾಶ ನೀಡಲು ಸಂಸದರ ಪಟ್ಟು: ಕೆರಳಿದ ಖಾಸಗಿ ಸಾರಿಗೆ ಚಾಲಕರು

October 2, 2023

BMTC ನೌಕರರಿಗೆ ಗುಡ್ ನ್ಯೂಸ್: ಡಿಪೋಗಳಲ್ಲೇ ಊಟ ತಿಂಡಿ ಒದಗಿಸುವ ಕ್ಯಾಂಟೀನ್‌ ಆರಂಭ!

October 2, 2023

ಗಾಂಧಿಜೀ ಅವರ ಕನಸಾದ ಸ್ವಚ್ಛ ಭಾರತ ಕನಸನ್ನ ನನಸು ಮಾಡಬೇಕಿದೆ: ಗ್ರಾ.ಪಂ.ಅಧ್ಯಕ್ಷ ಅಶೋಕ್

October 2, 2023
Facebook Twitter Instagram
Monday, October 2
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
PrajatvkannadaPrajatvkannada
Home » ಆದಿಚುಂಚನಗಿರಿಯಲ್ಲಿ ಡಿಕೆಶಿ ಅಮಾವಾಸ್ಯೆ ಪೂಜೆ: ಇದರ ಹಿಂದಿದೆಯಾ ಸಿಎಂ ಆಗುವ ಕನಸು?
ಜಿಲ್ಲೆ Prajatv KannadaBy Prajatv KannadaMarch 21, 2023

ಆದಿಚುಂಚನಗಿರಿಯಲ್ಲಿ ಡಿಕೆಶಿ ಅಮಾವಾಸ್ಯೆ ಪೂಜೆ: ಇದರ ಹಿಂದಿದೆಯಾ ಸಿಎಂ ಆಗುವ ಕನಸು?

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ಮಂಡ್ಯ: 2023ರ ಕರ್ನಾಟಕ ವಿಧಾನಸಭಾ ಚುನಾವಣೆ (Karnataka Election 2023) ಹತ್ತಿರವಾಗುತ್ತಿದೆ. ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತದ ವಿಶ್ವಾಸದಲ್ಲಿದೆ. ಈ ನಡುವೆಯೇ ಸಿಎಂ ಗಾದಿ ಮೇಲೆ ಕಣ್ಣಿಟ್ಟಿರುವ ಡಿಕೆಶಿ (DK Shivakumar) ಅಮಾವಾಸ್ಯೆ ಪೂಜೆ ನೆಪದಲ್ಲಿ ಕಾಲಭೈರವೇಶ್ವರನ ಮೊರೆ ಹೋಗಿದ್ದಾರೆ.

2023ರ ಕರ್ನಾಟಕ ವಿಧಾನಸಭಾ ಚುನಾವಣೆ ಘೋಷಣೆಗೆ ದಿನಗಣನೆ ಆರಂಭವಾಗಿದೆ. ಸತಾಯಗತಾಯ ಚುನಾವಣೆ ಗೆಲ್ಲಲೇಬೇಕೆಂದು ಎಲ್ಲಾ ರಾಜಕೀಯ ಪಕ್ಷಗಳು ರಾಜಕೀಯ ತಂತ್ರಗಾರಿಕೆಯಲ್ಲಿ ತೊಡಗಿವೆ. ಕೆಪಿಸಿಸಿ ಅಧ್ಯಕ್ಷರಾದ ನಂತರ ಡಿ.ಕೆ.ಶಿವಕುಮಾರ್, ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ರಾಜ್ಯ ಸುತ್ತುತ್ತಿದ್ದಾರೆ. ಕಾಂಗ್ರೆಸ್ ಪಕ್ಷವನ್ನ ಅಧಿಕಾರಕ್ಕೆ ತರುವ ಜೊತೆಗೆ ಸಿಎಂ ಆಗಲೇಬೇಕೆಂದು ಪಣತೊಟ್ಟಿರುವ ಡಿಕೆಶಿ, ದೇವರ ಮೊರೆ ಹೋಗಿದ್ದಾರೆ. ಯುಗಾದಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ಇಂದು ಶ್ರೀಕ್ಷೇತ್ರ ಆದಿಚುಂಚನಗಿರಿಗೆ ಭೇಟಿ ನೀಡಿದ್ದು, ಶ್ರೀಕಾಲಭೈರವೇಶ್ವರನ ದರ್ಶನ ಪಡೆದು ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದ್ದಾರೆ.

ಆದಿಚುಂಚನಗಿರಿ ಶ್ರೀಕಾಲಭೈರವೇಶ್ವರನಿಗೆ ಅಮಾವಾಸ್ಯೆಯಂದು ಪೂಜೆ ಸಲ್ಲಿಸೋದು ವಿಶೇಷ. ಅದರಲ್ಲೂ ನಿರಂತರ ಮೂರು ಅಮಾವಾಸ್ಯೆ ಪೂಜೆ ಸಲ್ಲಿಸಿ, ಸಂಕಲ್ಪ ಮಾಡಿದ್ರೆ ಇಷ್ಟಾರ್ಥ ಸಿದ್ಧಿಸುತ್ತೆ ಅನ್ನೋದು ಇಲ್ಲಿನ ಭಕ್ತರ ನಂಬಿಕೆ. ಈ ಹಿಂದೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕೂಡ ನಿರಂತರ ಮೂರು ಅಮಾವಾಸ್ಯೆಗಳಂದು ವಿಶೇಷ ಪೂಜೆ ಸಲ್ಲಿಸಿದ್ರು. ಅದರ ಪೂಜಾ ಫಲವಾಗಿ 2018ರ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಗದ್ದುಗೆಗೇರಿದ್ರು. ಇದೀಗ ಕುಮಾರಸ್ವಾಮಿ ಅವರ ಹಾದಿಯಲ್ಲೇ ಸಾಗುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅಮಾವಾಸ್ಯೆಯಂದು ಕಾಲಭೈರವೇಶ್ವರನ ಮೊರೆ ಹೋಗಿದ್ದು ವಿಶೇಷ ಪೂಜೆ ಸಲ್ಲಿಸಿದ್ರು.

ಇಂದು ಡಿ.ಕೆ ಶಿವಕುಮಾರ್, ದಂಪತಿ ಸಹಿತ ಆದಿಚುಂಚನಗಿರಿ (Adichunchangiri) ಶ್ರೀಕ್ಷೇತ್ರಕ್ಕೆ ಆಗಮಿಸಿ, ವಿಶೇಷ ಪೂಜೆ ಸಲ್ಲಿಸಿದ್ರು. ಪೂಜೆ ನಂತರ ನಿರ್ಮಲಾನಂದನಾಥ ಶ್ರೀಗಳು, ಡಿಕೆಶಿಗೆ ಶಾಲು, ಹಾರ ಹಾಕಿ, ಫಲ-ಪುಷ್ಪ ನೀಡಿ ಆಶೀರ್ವದಿಸಿದ್ರು. ಬಳಿಕ ಚುಂಚನಗಿರಿ ಶ್ರೀಗಳ ಜೊತೆ ಸುದೀರ್ಘ ಮಾತುಕತೆ ನಡೆಸಿದ್ರು. ಇದಕ್ಕೂ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದ ಡಿ.ಕೆ.ಶಿವಕುಮಾರ್, ಹೊಸ ವರ್ಷದ ಅಮಾವಾಸ್ಯೆ, ವಿಶೇಷ ಹಬ್ಬ. ಹೀಗಾಗಿ ಶ್ರೀಮಠಕ್ಕೆ ಬಂದಿದ್ದೇನೆ. ಈ ವರ್ಷ ರಾಜ್ಯದಲ್ಲಿ ದೊಡ್ಡ ವ್ಯತ್ಯಾಸ, ಬದಲಾವಣೆ ಆಗ್ತಿದೆ. ನಾಡಿಗೆ ಒಳ್ಳೆಯದಾಗಲಿ, ನಮಗೆ, ನಿಮಗೆಲ್ಲ ಒಳ್ಳೆಯದಾಗ್ಲೀ ಅಂತಾ ನಾನು, ನನ್ನ ಧರ್ಮ ಪತ್ನಿ ಅಮಾವಾಸ್ಯೆ ಪೂಜೆಯಲ್ಲಿ ಪಾಲ್ಗೊಳ್ತಿದ್ದೇವೆ. ನಮಗೂ, ಭಗವಂತನಿಗೂ ವ್ಯವಹಾರ ನಡೆಯುವ ಸ್ಥಳ. ದೇವರನ್ನ ಕೇಳೋದು ನಾನು, ವರ ಕೊಡೋದು ದೇವರು. ಸಂಕಲ್ಪ ಮಾಡಿಕೊಳ್ಳುವುದು ನನಗೂ, ಭಗವಂತನಿಗೂ ಬಿಟ್ಟಿದ್ದು. ಮತ್ತೊಂದು ಅಮಾವಾಸ್ಯೆ ಪೂಜೆಗೆ ಬಂದರೆ ಹೇಳ್ತೀನಿ ಬಿಡಿ ಅಂತಂದ್ರು.

ಉರಿಗೌಡ, ನಂಜೇಗೌಡ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಡಿಕೆಶಿ, ನಾವ್ಯಾರೂ ಹೇಡಿಗಳಲ್ಲ. ಉರಿಗೌಡ, ನಂಜೇಗೌಡ, ಸಿ.ಟಿ.ರವಿ, ಅಶೋಕ್, ಅಶ್ವಥ್ ನಾರಾಯಣ್ ಹೊಸದಾಗಿ ಸ್ಟೋರಿ ಬರೆಯುತ್ತಿದ್ದಾರೆ. ಸಿನಿಮಾ ತೆಗೆಯೋಕೆ ಇನ್ಯಾರೋ ಒಬ್ಬ. ಇದು ಇಡೀ ಒಕ್ಕಲಿಗ ಸಮುದಾಯಕ್ಕೆ ಮಸಿ ಬಳಿಯುವ ಕೆಲಸ. ಬಿಜೆಪಿಯವರ ಈ ಕೆಲಸವನ್ನ ಖಂಡಿಸ್ತೀನಿ. ನಮ್ಮ ಸ್ವಾಮಿಗಳು ಇದಕ್ಕೆ ಹೋರಾಟದ ನೇತೃತ್ವ ವಹಿಸಬೇಕು. ಅವನ್ಯಾವನನ್ನೋ ಕರೆದು ಸಿನಿಮಾ ಮಾಡಬೇಡ ಅಂತಾ ಕೂರಿಸಿ ಮಾತಾಡಬಾರದು. ನಮ್ಮ ಒಕ್ಕಲುತನಗಳ ಬಗ್ಗೆ ಬೇಕಿದ್ರೆ ನೂರು ಸಿನಿಮಾ ಮಾಡಲಿ. ನಾವು ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ಬಂದರೆ ಯಾವ ಕಾರಣಕ್ಕೂ ಬಿಡೋದಿಲ್ಲ. ಇದರ ವಿರುದ್ಧದ ಹೋರಾಟಕ್ಕೆ ಸ್ವಾಮಿಗಳು ನೇತೃತ್ವ ವಹಿಸಬೇಕು. ಹೋರಾಟದ ಸ್ವರೂಪ, ನಾಯಕತ್ವವನ್ನ ಸ್ವಾಮಿಗಳು ವಹಿಸಬೇಕು. ಇಲ್ಲವಾದರೆ ನಾನು ಒಂದು ಪಕ್ಷದ ಅಧ್ಯಕ್ಷನಾಗಿ ನಾನೇ ಹೋರಾಟ ಹಮ್ಮಿಕೊಳ್ತೀನಿ. ಒಕ್ಕಲಿಗರಿಗೆ ಕಳಂಕ ತರಲು ಬಿಜೆಪಿಯವರು ಹೊರಟಿದ್ದಾರೆ. ಉರಿಗೌಡ, ನಂಜೇಗೌಡ ಅನ್ನೋರು ಯಾರೂ ಇಲ್ಲ ಎಂದರು.

ಬಿಜೆಪಿಯವರೇ ಉರಿಗೌಡ, ನಂಜೇಗೌಡ. ಮೊದಲು 40 ಪರ್ಸೆಂಟ್ ಫೈಲ್, ಕೊರೊನಾ ಸಂದರ್ಭದ ಕರಪ್ಷನ್ ಬಗ್ಗೆ ಸಿನಿಮಾ ತೆಗೆಯಲಿ. ಈ ಬಗ್ಗೆ ಎರಡು ಸಿನಿಮಾ ತೆಗೆದರೆ ಸಾಕು. ನಾನು ಸ್ವಾಮಿಗಳ ಜೊತೆ ಹೋರಾಟದ ಬಗ್ಗೆ ಮಾತಾಡಿಲ್ಲ. ನಾನುಂಟು ದೇವರುಂಟು, ನಾನುಂಟು ಸ್ವಾಮಿಗಳುಂಟು. ಉರಿಗೌಡ, ನಂಜೇಗೌಡ ವಿಚಾರವನ್ನ ಪಠ್ಯಕ್ಕೆ ಸೇರಿಸುವ ವಿಚಾರವಾಗಿ, ಯಾವ ಪಠ್ಯನೂ ಇಲ್ಲ. ಅದನ್ನೆಲ್ಲ ಸ್ಕೂಲ್ ಮೇಷ್ಟ್ರು ಹತ್ತಿರ ಕೇಳಿ. ಅಶ್ವಥ್ ನಾರಾಯಣ್, ರವಿಗೆ ಪಾಠ ಹೇಳಿಕೊಟ್ಟ ಮೇಷ್ಟ್ರು ಕೇಳಿ. ಅವರೇನಾದ್ರೂ ಹೇಳಿಕೊಟ್ಟಿದ್ರಾ ಅಂತಾ ಪ್ರಶ್ನಿಸಿದ್ರು.

ಒಟ್ಟಾರೆ ಸಿಎಂ ಗಾದಿ ಮೇಲೆ ಕಣ್ಣಿಟ್ಟಿರುವ ಡಿಕೆಶಿ ಅಮಾವಾಸ್ಯೆ ಪೂಜೆ ನೆಪದಲ್ಲಿ ಕಾಲಭೈರವೇಶ್ವರನ ಮೊರೆ ಹೋಗಿದ್ದಾರೆ. ಮತ್ತೊಂದೆಡೆ ಒಕ್ಕಲಿಗರ ಮತ ಭೇಟೆಗೆ ಇಳಿದಿದ್ದ ಬಿಜೆಪಿಯವರಿಗೆ ಸ್ವಾಮೀಜಿಯವರ ಮೂಲಕವೇ ಕನಕಪುರ ಬಂಡೆ ಠಕ್ಕರ್ ಕೊಡಲು ಮುಂದಾಗಿರೋದಂತೂ ಸುಳ್ಳಲ್ಲ.

 

Demo
Share. Facebook Twitter WhatsApp Pinterest LinkedIn Tumblr Telegram Email

Related Posts

KRS ಡ್ಯಾಂ ಗೆ ಪ್ರಮೋದಾದೇವಿ ಒಡೆಯರ್ ಭೇಟಿ: ಡ್ಯಾಂ ಬರಿದಾಗಿರುವುದನ್ನ ಕಂಡು ರಾಜವಂಶಸ್ಥೆ ಬೇಸರ

October 2, 2023

ಹೊಸ ನೀರು ಬರಬೇಕು, ಹಳೆನೀರು ರಿಟೈಡ್ ಆಗಬೇಕು: ಬಸನಗೌಡ ಪಾಟೀಲ್ ಯತ್ನಾಳ್ ವ್ಯಂಗ್ಯ

October 2, 2023

ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ಸಿದ್ದ -ಆನಂದ ಸಿಂಗ್

October 2, 2023

ಕಾವೇರಿ ನೀರು ಬಿಟ್ಟಾಗ ಇವರನ್ನು ಕಳ್ಳರು ಅಂದಿದ್ದೆ, ಈಗ ದಡ್ಡರು ಎನ್ನಬೇಕಿದೆ: ಕೆಎಸ್ ಈಶ್ವರಪ್ಪ

October 2, 2023

ಕಾಂಗ್ರೆಸ್ ಸರ್ಕಾರ ಈಗಾಗಲೇ ರಾಜ್ಯದ ಜನರ ವಿಶ್ವಾಸ ಕಳೆದುಕೊಂಡಿದೆ: ಬಸವರಾಜ ಬೊಮ್ಮಾಯಿ

October 2, 2023

ವಾಲ್ಮೀಕಿ ಪೀಠದ ಶ್ರೀಗೆ ಮಕ್ಕಳಿರುವ ವಿಚಾರ, ಸಚಿವ ಜಾರಕಿಹೊಳಿ ಸ್ಪೋಟಕ ಹೇಳಿಕೆ

October 2, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.