ಬೆಂಗಳೂರು: ಮೇಕೆದಾಟು ಯೋಜನೆಯನ್ನು ಯಾವುದೇ ಕಾರಣಕ್ಕೂ ಜಾರಿ ಮಾಡಲು ಬಿಡುವುದಿಲ್ಲ ಎಂದು ತಮ್ಮ I.N.D.I. ಮಿತ್ರಪಕ್ಷ ಡಿಎಂಕೆ ತನ್ನ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಬಿಜೆಪಿ ಟ್ವೀಟ್ ಮಾಡಿದ್ದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಡಿಸಿಎಂ ಅವರೇ, ಈಗ ‘ನಮ್ಮ ನೀರು, ನಮ್ಮ ಹಕ್ಕು’ ಎಂದು ತಮ್ಮ ಶಾಸಕರನ್ನು ಚೆನ್ನೈಗೆ ಕರೆದುಕೊಂಡು ಹೋಗಿ ಪ್ರತಿಭಟನೆ ಮಾಡುತ್ತೀರಾ ಅಥವಾರಾಹಲ್ ಗಾಂಧಿ ಅವರನ್ನು ಮೆಚ್ಚಿಸಲು ಕನ್ನಡಿಗರ ಹಿತಾಸಕ್ತಿ ಬಲಿಕೊಟ್ಟು ರಾಜಿ ಮಾಡಿಕೊಳ್ಳುತ್ತೀರಾ? ಎಂದು ಬಿಜೆಪಿ ಪ್ರಶ್ನೆ ಮಾಡಿದೆ.
ಬೆಂಗಳೂರಿಗೆ ನೀರು ತರುತ್ತೇವೆ ಎಂದು ಮೇಕೆದಾಟು ಪಾದಯಾತ್ರೆ ಮಾಡಿ ಕನ್ನಡಿಗರ ಮೂಗಿಗೆ ತುಪ್ಪ ಸವರಿ ಅಧಿಕಾರಕ್ಕೇರಿದ ನಾಡದ್ರೋಹಿ ಕಾಂಗ್ರೆಸ್ ಸರ್ಕಾರ ಈಗ ಕನ್ನಡಿಗರ ಬೆನ್ನಿಗೆ ಚೂರಿ ಹಾಕುತ್ತಿದೆ ಎಂದು ಬಿಜೆಪಿ ಭಾರೀ ತೀವರವಾಗಿ ಆಕ್ರೋಶ ವ್ಯಕ್ತಪಡಿಸಿದೆ.