ಯಾವುದೇ ಕಾರಣಕ್ಕೂ ಜೆಡಿಎಸ್ ಪಕ್ಷವನ್ನ ಬಿಜೆಪಿ ಜೊತೆ ವಿಲೀನ ಮಾಡೊಲ್ಲ ಎಂದು ಮಾಜಿ ಪ್ರಧಾನಿ ದೇವೇಗೌಡ , ಸಿಎಂ ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
ಮಂಡ್ಯ, ಹಾಸನ ಸಮಾವೇಶದಲ್ಲಿ ಬಿಜೆಪಿ ಜೊತೆ ಮೈತ್ರಿಗೆ ವಿರೋಧ ಮಾಡಿ, ಜೆಡಿಎಸ್ನ ಜಾತ್ಯತೀತ ನಿಲುವಿನ ಬಗ್ಗೆ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ರು. ಶೂನ್ಯ ಸಾಧನೆ ಭಯಕ್ಕೆ ಬಿಜೆಪಿ ಜೊತೆ ಮೈತ್ರಿ ಆಗಿದ್ದರು ಅಂತ ಸಿದ್ದರಾಮಯ್ಯ ಭಾಷಣ ಮಾಡಿದ್ರು. ಇದಕ್ಕೆ ತಿರುಗೇಟು ಕೊಟ್ಟ ದೇವೇಗೌಡರು ಸುದ್ದಿಗೋಷ್ಠಿ ನಡೆಸಿ ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿದರು
ಜೆಡಿಎಸ್ ಪಕ್ಷ ನಡೆಸಲು ಸಮರ್ಥ ನಾಯಕ ಕುಮಾರಸ್ವಾಮಿ ಇದ್ದಾರೆ. ಲೋಕಸಭೆಯಲ್ಲಿ ಕುಮಾರಸ್ವಾಮಿ ಸೀಟು ಹಂಚಿಕೆ ಮಾಡಿಕೊಳ್ತಾರೆ. ಆದರೆ ಪಕ್ಷ ವಿಲೀನ ಮಾಡೊಲ್ಲ. ಮರ್ಜ್ ಮಾಡ್ತಾರೆ ಅನ್ನೋದು ನಿಮ್ಮ ಕಲ್ಪನೆ. ನಿಮಗೆ ತಾಳ್ಮೆ ಇರಲಿ. ಅ ದಿನಗಳನ್ನ ನಿಮ್ಮ ಕಣ್ಣಿಂದ ನೋಡ್ತೀರಾ. ಆಗ ನಾನು ಇರುತ್ತೇನೆ ಎಂದು ಸಿದ್ದರಾಮಯ್ಯಗೆ ತಿರುಗೇಟು ಕೊಟ್ಟರು.