ಬೆಂಗಳೂರು: ರಾಜ್ಯದ ಅರ್ಥವ್ಯವಸ್ಥೆಯು ಹಿಂದಿನ ಸರ್ಕಾರದ ಅವಧಿಯಲ್ಲಿ ಹದಗೆಟ್ಟಿರುತ್ತದೆ. ಕೇಂದ್ರ ಸಾಂಖ್ಯಿಕ ಕಛೇರಿಯು ಬಿಡುಗಡೆ ಮಾಡಿರುವ ಮುಂಗಡ ಅಂದಾಜುಗಳ ಪ್ರಕಾರ ರಾಜ್ಯದ ಜಿ.ಎಸ್.ಡಿ.ಪಿ ಯು 2022-23ರಲ್ಲಿ ಶೇ. 7.9 ರಷ್ಟು ಬೆಳವಣಿಗೆ ದಾಖಲಿಸಿದೆ.
2021-22 ರಲ್ಲಿ ರಾಜ್ಯದ ಜಿ.ಎಸ್.ಡಿ.ಪಿ ಬೆಳವಣಿಗೆಯು ಶೇ.11 ರಷ್ಟು ದಾಖಲಾಗಿತ್ತು. 2022-23ರ ವಲಯವಾರು ಬೆಳವಣಿಗೆಯನ್ನು ಗಮನಿಸಿದರೆ, ಕೃಷಿ, ಕೈಗಾರಿಕೆ ಮತ್ತು ಸೇವಾ ವಲಯಗಳಲ್ಲಿನ ಬೆಳವಣಿಗೆಯು ಶೇ. 5.5, 5.1 ಮತ್ತು 9.2 ರಷ್ಟು ಬೆಳವಣಿಗೆಯನ್ನು ದಾಖಲಿಸಿರುತ್ತದೆ.
- ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಅಂದರೆ, 2013-14 ರಿಂದ 2017-18ರವರೆಗೆ ಕೈಗಾರಿಕಾ ವಲಯದಲ್ಲಿ ಶೇ. 8.70 ರಷ್ಟು ಬೆಳವಣಿಗೆ (CAGR) ಹಾಗೂ ಸೇವಾ ವಲಯದಲ್ಲಿ ಶೇ. 9.69 ರಷ್ಟು ಬೆಳವಣಿಗೆ (CAGR) ದಾಖಲಾಗಿರುತ್ತದೆ. ಆದರೆ, 2019-20 ರಿಂದ
2022-23ರ ವರೆಗೆ ಕೈಗಾರಿಕಾ ವಲಯದಲ್ಲಿ ಶೇ. 3.86 ರಷ್ಟು ಬೆಳವಣಿಗೆ (CAGR) ಹಾಗೂ ಸೇವಾ ವಲಯದಲ್ಲಿ ಶೇ. 4.25 ರಷ್ಟು ಬೆಳವಣಿಗೆ (CAGR) ದಾಖಲಾಗಿದ್ದು, ಇದು ಕೋವಿಡ್ನಿಂದ ತತ್ತರಿಸಿದ ರಾಜ್ಯದ ಆರ್ಥಿಕತೆಯನ್ನು ಪುನಶ್ಚೇತನಗೊಳಿಸಲು ಈ ಹಿಂದಿದ್ದ ಸರ್ಕಾರವು ವಿಫಲವಾಗಿರುವುದನ್ನು ಎತ್ತಿ ತೋರಿಸುತ್ತದೆ.
- 2022-23ರಲ್ಲಿ ಅಗತ್ಯ ವಸ್ತುಗಳ ಬೆಲೆ ಹೆಚ್ಚಳ ಮತ್ತು ತೈಲ ಬೆಲೆಯ ಏರಿಕೆಯನ್ನು ತಡೆಯುವಲ್ಲಿ ಕೇಂದ್ರ ಸರ್ಕಾರವು ವಿಫಲವಾಗಿದೆ. ತೀವ್ರ ಹಣದುಬ್ಬರದಿಂದ ಜನ ಸಾಮಾನ್ಯರು ಕಂಗಾಲಾಗಿದ್ದು, ಅವರನ್ನು ಇಂತಹ ಪ್ರತಿಕೂಲ ವಾತಾವರಣದಿಂದ ರಕ್ಷಿಸುವುದೇ ನಮ್ಮ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಿಗೆ ಪ್ರೇರಣೆಯಾಗಿದೆ.
- 2021-22 ರಲ್ಲಿ ರಾಜ್ಯಕ್ಕೆ 22 ಬಿಲಿಯನ್ ಡಾಲರ್ ವಿದೇಶಿ ಬಂಡವಾಳ ಹೂಡಿಕೆ ಹರಿದು ಬಂದಿದ್ದು, 2022-23ರಲ್ಲಿ ಇದು 10 ಬಿಲಿಯನ್ ಡಾಲರ್ಗೆ ಇಳಿದಿದೆ. ರಾಜ್ಯಕ್ಕೆ ಹೆಚ್ಚು ವಿದೇಶಿ ಬಂಡವಾಳ ಹೂಡಿಕೆಯನ್ನು ಸೆಳೆಯಲು ಬೇಕಾದ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ನಮ್ಮ ಸರ್ಕಾರವು ಬದ್ಧವಾಗಿದೆ.
ರಾಜ್ಯದ ಹಣಕಾಸು ಪರಿಸ್ಥಿತಿ
- ಹಿಂದಿನ ಸರ್ಕಾರವು ವಿತ್ತೀಯ ಶಿಸ್ತಿನ ನೀತಿಗಳನ್ನು ಗಾಳಿಗೆ ತೂರಿ ಪ್ರಮುಖ ಇಲಾಖೆಗಳಲ್ಲಿ ಬಾರಿ ಸಂಖ್ಯೆಯ ಕಾಮಗಾರಿಗಳಿಗೆ ಮಂಜೂರಾತಿ ನೀಡಿರುತ್ತದೆ. ಹಿಂದಿನ ಸರ್ಕಾರವು ತನ್ನ ಅಧಿಕಾರಾವಧಿಯಲ್ಲಿ ಒ