ಅಹಮದಾಬಾದ್: ಬಹುನಿರೀಕ್ಷಿತ 2023ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯನ್ನು ಕಣ್ತುಂಬಿಸಿಕೊಳ್ಳಲು ಕೋಟ್ಯಂತರ ಅಭಿಮಾಣಿಗಳು ಎದುರು ನೊಡುತ್ತಿದ್ದರೆ. ಶುಕ್ರವಾರ ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಉದ್ಘಾಟನಾ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳು ಸೆಣಸುವ ಮೂಲಕ 2023ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಅಧಿಕೃತವಾಗಿ ಆರಂಭವಾಗಲಿದೆ.
ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಕಳೆದ ಆವೃತ್ತಿಯಲ್ಲಿ ನೀರಸ ಪ್ರದರ್ಶನ ತೋರುವ ಮೂಲಕ ಪಾಯಿಂಟ್ಸ್ ಟೇಬಲ್ನಲ್ಲಿ ಕುಸಿದಿತ್ತು. ಆದರೆ, ಈ ಬಾರಿ ಹಲವು ಸ್ಟಾರ್ ಆಟಗಾರರನ್ನು ತಂಡಕ್ಕೆ ಸೇರಿಸಿಕೊಂಡಿರುವ ಸಿಎಸ್ಕೆ, ಈ ಬರಿ ಐದನೇ ಪ್ರಶಸ್ತಿ ಮುಡಿಗೇರಿಸಿಕೊಳ್ಳಲು ಎದುರು ನೋಡುತ್ತಿದೆ.
ಆದರೆ, ಹಾಲಿ ಚಾಂಪಿಯನ್ಸ್ ಗುಜರಾತ್ ಟೈಟನ್ಸ್ ತಂಡ ಬಾಗವಹಿಸಿದ ಮೊದಲ ಆವೃತ್ತಿಯಲ್ಲಿಯೇ ಚೊಚ್ಚಲ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತ್ತು. ಇದೀಗ ಅದೇ ಲಯವನ್ನು 2023ರ ಟೂರ್ನಿಯಲ್ಲಿಯೂ ಇದೇ ಲಯವನ್ನು ಮುಂದುವರಿಸಲು ಹಾರ್ದಿಕ್ ಪಾಂಡ್ಯ ನಾಯಕತ್ವದ ಗುಜರಾತ್ ಟೈಟನ್ಸ್ ತಂಡ ನಿರೀಕ್ಷಿಸುತ್ತಿದೆ.
ವಾತಾವರಣ ವರದಿ
ಅಹಮದಾಬಾದ್ನಲ್ಲಿ ಕಳೆದ ಎರಡು ದಿನಗಳಿಂದ ಆಗಾಗ ಮಳೆ ಬಿದ್ದಿತ್ತು. ಆದರೆ, ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳ ನಡುವಣ ಶುಕ್ರವಾರದ ಪಂದ್ಯಕ್ಕೆ ಮಳೆ ಅಡ್ಡಿ ಉಂಟು ಮಾಡುವ ಸಾಧ್ಯತೆ ಇಲ್ಲ. ಹಾಗಾಗಿ ಉದ್ಘಾಟನಾ ಪಂದ್ಯ ಯಾವುದೇ ಅಡೆತಡೆ ಇಲ್ಲದೆ ಸಾಗಲಿದೆ ಎಂದು ನಿರೀಕ್ಷಿಸಬಹುದಾಗಿದೆ. ಸದ್ಯ ಇಲ್ಲಿನ ಉಷ್ಣಾಂಶ 27 ರಿಂದ 32 ಸೆಲ್ಸಿಯಸ್ ರಷ್ಟು ಇದೆ. ಇದರ ಜೊತೆಗೆ ಆರ್ದ್ರತೆ ಶೇಕಡ 20 ರಷ್ಟಿದೆ.
ಪಿಚ್ ರಿಪೋರ್ಟ್
ಅಹಮದಾಬಾದ್ನ ನರೇಂದ್ರ ಮೋದಿ ಕ್ರಿಕೆಟ್ ಕ್ರೀಡಾಂಗಣದ ಪಿಚ್ ಬ್ಯಾಟಿಂಗ್ ಸ್ನೇಹಿಯಾಗಿದೆ. ಪಂದ್ಯದ ಆರಂಭದಲ್ಲಿ ಬ್ಯಾಟಿಂಗ್ಗೆ ಯೋಗ್ಯವಾಗಿದ್ದರೆ, ಪಂದ್ಯ ಸಾಗುತ್ತಿದ್ದಂತೆ ಇಲ್ಲಿನ ವಿಕೆಟ್ ಸ್ಪಿನ್ನರ್ಗಳು ಪರಿಣಾಮಕಾರಿಯಾಗಲಿದ್ದಾರೆ. ಪಂದ್ಯದ ಮೊದಲ ಇನಿಂಗ್ಸ್ನಲ್ಲಿ ಸರಾಸರಿ ಮೊತ್ತ 170 ರನ್ಗಳಾಗಿದೆ. ಆದರೆ, ಚೇಸಿಂಗ್ ತಂಡಗಳು ಇಲ್ಲಿನ ಕಂಡೀಷನ್ಸ್ ಅನ್ನು ಬಳಸಿಕೊಳ್ಳುವ ಸಾಧ್ಯತೆ ಇದೆ. ಹಾಗಾಗಿ ಇಲ್ಲಿನ ಮೈದಾನ ಚೇಸಿಂಗ್ ತಂಡಗಳಿಗೆ ಲಾಭದಾಯಕವಾಗಿದೆ.
ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಟೈಟನ್ಸ್ ಎರಡೂ ತಂಡಗಳಲ್ಲಿಯೂ ಗುಣಮಟ್ಟದ ಬ್ಯಾಟ್ಸ್ಮನ್ಗಳಿದ್ದಾರೆ. ಈ ಹಿನ್ನೆಲೆಯಲ್ಲಿ ಉದ್ಘಾಟನಾ ಪಂದ್ಯದಲ್ಲಿ ರನ್ ಹೊಳೆ ಹರಿಯುವ ಸಾಧ್ಯತೆ ಇದೆ. ಆ ಮೂಲಕ ಅಭಿಮಾನಿಗಳಿಗೆ ಭರ್ಜರಿ ರಸದೌತಣ ಉಣಬಡಿಸುವ ಸಾಧ್ಯತೆ ಇದೆ.
ಪಂದ್ಯದ ವಿವರ
2023ರ ಐಪಿಎಲ್ ಟೂರ್ನಿ
ಚೆನ್ನೈ ಸೂಪರ್ ಕಿಂಗ್ಸ್ vs ಗುಜರಾತ್ ಟೈಟನ್ಸ್
ದಿನಾಂಕ: ಮಾರ್ಚ್ 31, 2023
ಸಮಯ: ಸಂಜೆ 07: 30ಕ್ಕೆ
ಸ್ಥಳ: ನರೇಂದ್ರ ಮೋದಿ ಕ್ರೀಡಾಂಗಣ, ಅಹಮದಾಬಾದ್
ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್ XI
ಚೆನ್ನೈ ಸೂಪರ್ ಕಿಂಗ್ಸ್: ಡೆವೊನ್ ಕಾನ್ವೆ, ಋತುರಾಜ್ ಗಾಯಕ್ವಾಡ್, ಮೊಯೀನ್ ಅಲಿ, ಶಿವಂ ದುಬೆ, ಅಂಬಾಟಿ ರಾಯುಡು, ಬೆನ್ ಸ್ಟೋಕ್ಸ್, ರವೀಂದ್ರ ಜಡೇಜಾ, ಎಂಎಸ್ ಧೋನಿ(ನಾಯಕ), ದೀಪಕ್ ಚಹರ್, ಮುಕೇಶ್ ಚೌಧರಿ, ಮತೀಶ ಪತಿರಣ
ಗುಜರಾತ್ ಟೈಟನ್ಸ್: ಶುಭಮನ್ ಗಿಲ್, ವೃದ್ಧಿಮಾನ್ ಸಹಾ, ಕೇನ್ ವಿಲಿಯಮ್ಸನ್, ಹಾರ್ದಿಕ್ ಪಾಂಡ್ಯ, ವಿಜಯ್ ಶಂಕರ್, ಮ್ಯಾಥ್ಯೂ ವೇಡ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಶಿವಂ ಮಾವಿ, ಮೊಹಮ್ಮದ್ ಶಮಿ, ಜಾಶ್ ಲಿಟ್ಲ್