ನಾವು ಮಾಡುವ ಎಲ್ಲಾ ಅಡುಗೆಯಲ್ಲಿ ಬಹುತೇಕ ಬೆಳ್ಳುಳ್ಳಿಯನ್ನು ಬಳಸುತ್ತೇವೆ. ಬೆಳ್ಳುಳ್ಳಿ ಹಾಕಿದರೆ ಅದರ ರುಚಿಯೇ ಬೇರೆ. ಇದು ಹೃದಯದ ಆರೋಗ್ಯವನ್ನು ಸುಧಾರಿಸುವುದಲ್ಲದೆ, ಜೀರ್ಣಕಾರಿ ಸಮಸ್ಯೆಗಳನ್ನು ತಡೆಯುತ್ತದೆ. ಇದು ರೋಗನಿರೋಧಕ ಶಕ್ತಿಯನ್ನು ಸಹ ಹೆಚ್ಚಿಸುತ್ತದೆ. ಬೆಳ್ಳುಳ್ಳಿಯಲ್ಲಿ ಅಲಿಸಿನ್ ಸಮೃದ್ಧವಾಗಿದೆ.
ಆಯುರ್ವೇದದಲ್ಲಿ ಬೆಳ್ಳುಳ್ಳಿಗೂ ಉತ್ತಮ ಮಹತ್ವವಿದೆ.
ಬೆಳ್ಳುಳ್ಳಿ ಅದ್ಭುತ ಔಷಧೀಯ ಗುಣಗಳನ್ನು ಹೊಂದಿದೆ. ಈಗ ಪ್ರತಿದಿನ ಬೆಳ್ಳುಳ್ಳಿಯನ್ನು ಸೇವಿಸುವುದರಿಂದ ಏನೆಲ್ಲಾ ಪ್ರಯೋಜನಗಳಿವೆ ಎಂಬುದನ್ನು ತಿಳಿಯೋಣ.
ಬೆಳ್ಳುಳ್ಳಿಯಲ್ಲಿರುವ ಪೋಷಕಾಂಶಗಳು:
ಕಾರ್ಬೋಹೈಡ್ರೇಟ್ಗಳು, ಕ್ಯಾಲೋರಿಗಳು, ಡೈಟರಿ ಫೈಬರ್, ಸಕ್ಕರೆ ಅಂಶಗಳು, ಸೋಡಿಯಂ, ಪೊಟ್ಯಾಸಿಯಮ್, ವಿಟಮಿನ್ ಸಿ, ಜಿಂಗ್, ಐರನ್, ಪೊಟ್ಯಾಸಿಯಮ್, ಮೆಗ್ನೀಸಿಯಮ್ ವಿಟಮಿನ್ ಕೆ ಇರುತ್ತವೆ. ಬೆಳ್ಳುಳ್ಳಿಯನ್ನು ನಿಯಮಿತವಾಗಿ ಸೇವಿಸಿದರೆ ಈ ವಿಟಮಿನ್ ಗಳು ಮತ್ತು ಮಿನರಲ್ ಗಳು ಹೆಚ್ಚಿನ ಪ್ರಮಾಣದಲ್ಲಿ ದೊರೆಯುತ್ತವೆ.
ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ:
ಜರ್ನಲ್ ಆಫ್ ಕ್ಲಿನಿಕಲ್ ಮತ್ತು ಟ್ರಾನ್ಸ್ಲೇಶನಲ್ ರಿಸರ್ಚ್ನಲ್ಲಿ 2021 ರ ಸಮೀಕ್ಷೆಯ ಪ್ರಕಾರ, ಬೆಳ್ಳುಳ್ಳಿ ತಿನ್ನುವುದರಿಂದ ಬಿಳಿ ರಕ್ತ ಕಣಗಳ ಮಟ್ಟವನ್ನು ಪುನಃಸ್ಥಾಪಿಸಲು ಸಹಾಯ ಮಾಡುತ್ತದೆ.
ಆಲ್ಝೈಮರ್ನ್ ಬರದಂತೆ ತಡೆಗಟ್ಟುತ್ತದೆ :
ಬೆಳ್ಳುಳ್ಳಿಯಲ್ಲಿರುವ ಹೆಚ್ಚಿನ ಆಯಂಟಿಆಕ್ಸಿಡೆಂಟ್ ಗುಣಗಳಿಂದಾಗಿ ಮೆದುಳನ್ನು ಬಾಧಿಸುವ ಆಲ್ಝೈಮರ್ ಮತ್ತು ಬುದ್ಧಿಮಾಂದ್ಯತೆಯಂತಹ ಕಾಯಿಲೆಗಳ ಸಮಸ್ಯೆ ಇರುವುದಿಲ್ಲ. ಅಲ್ಲದೆ ಬೆಳ್ಳುಳ್ಳಿ ಉತ್ತಮ ಹೆಪ್ಪುಗಟ್ಟುವಿಕೆಯನ್ನು ತಡೆಯುವ ಗುಣಗಳನ್ನು ಹೊಂದಿದೆ. ಹಾಗಾಗಿ ದೇಹದೊಳಗೆ ರಕ್ತ ಹೆಪ್ಪುಗಟ್ಟುವುದನ್ನು ತಡೆಯುತ್ತದೆ.
ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ:
ಸೆಂಟರ್ ಫಾರ್ ಡಸೀಜ್ ಕಂಟ್ರೋಲ್ ಅಂಡ್ ಪ್ರಿವೆನ್ಶನ್ ಸಮೀಕ್ಷೆಯ ಪ್ರಕಾರ, ಬೆಳ್ಳುಳ್ಳಿ ಕೊಲೆಸ್ಟ್ರಾಲ್ ಮಟ್ಟವನ್ನು ಸುಧಾರಿಸುತ್ತದೆ. ಹೃದ್ರೋಗದಿಂದ ಬಳಲುತ್ತಿರುವವರು ಪ್ರತಿದಿನ ಬೆಳ್ಳುಳ್ಳಿಯನ್ನು ತಿನ್ನುವುದರಿಂದ ಹೃದಯಕ್ಕೆ ರಕ್ತದ ಹರಿವು ಸುಧಾರಿಸುತ್ತದೆ. ಹೃದಯಾಘಾತವಾಗದಂತೆ ಎಚ್ಚರಿಕೆ ವಹಿಸಬಹುದು ಎನ್ನುತ್ತಾರೆ ತಜ್ಞರು.
ಒತ್ತಡವನ್ನು ಕಡಿಮೆ ಮಾಡುತ್ತದೆ:
ಇಂದಿನ ಬಿಡುವಿಲ್ಲದ ಜೀವನದಿಂದಾಗಿ ಒತ್ತಡ ವಿಪರೀತವಾಗಿ ಹೆಚ್ಚುತ್ತದೆ. ಪ್ರತಿದಿನ ಬೆಳ್ಳುಳ್ಳಿಯನ್ನು ಸೇವಿಸುವುದರಿಂದ ಒತ್ತಡದ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಬೆಳ್ಳುಳ್ಳಿಯಲ್ಲಿ ಸಲ್ಫರ್ ಸಂಯುಕ್ತಗಳು ಅಧಿಕವಾಗಿವೆ. ಇದು ಗ್ಲುಟಾಥಿಯೋನ್ ಮಟ್ಟವನ್ನು ಹೆಚ್ಚಿಸುತ್ತದೆ. ಇದು ಒತ್ತಡದ ವಿರುದ್ಧ ಕೆಲಸ ಮಾಡುತ್ತದೆ.