ಮೂಲಂಗಿ ಎಲೆಗಳಲ್ಲಿನ ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿದೆ ಎಂಬುದು ಸಂಶೋಧನೆಯಿಂದ ತಿಳಿದುಬಂದಿದೆ. ಇದು ಲಿವರ್, ಸ್ತನ, ಗರ್ಭಕಂಠ, ಪ್ರಾಸ್ಟೇಟ್ ಮತ್ತು ಶ್ವಾಸಕೋಶದ ಕ್ಯಾನ್ಸರ್ ನ ವಿರುದ್ಧ ಹೋರಾಡುತ್ತದೆ.
ಇದರ ಎಲೆಗಳಲ್ಲಿ ಫೈಬರ್ ಅಂಶ ಸಮೃದ್ಧವಾಗಿದ್ದು, ಇದು ಹೊಟ್ಟೆಯ ಆರೋಗ್ಯವನ್ನು ಉತ್ತಮವಾಗಿಡುತ್ತದೆ ಮತ್ತು ಮಲಬದ್ಧತೆ ಸಮಸ್ಯೆಯನ್ನು ನಿವಾರಿಸುತ್ತದೆ.
ಇದರ ಎಲೆಗಳಲ್ಲಿರುವ ಪೋಷಕಾಂಶಗಳು ಫ್ರಿ ರಾಡಿಕಲ್ಸ್ ಗಳ ವಿರುದ್ಧ ಹೋರಾಡುತ್ತದೆ. ಇದರಿಂದ ಅಂಗಾಂಶಗಳ ಮೇಲೆ ಅವುಗಳಿಂದಾಗುವ ಹಾನಿಯನ್ನು ತಪ್ಪಿಸುತ್ತದೆ.
ಮೂಲಂಗಿ ಎಲೆಗಳು ಮೆದುಳಿನ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದು ನಿಮ್ಮ ಜ್ಞಾಪಕಶಕ್ತಿಯನ್ನು ಹೆಚ್ಚಿಸುತ್ತದೆ.