ಬೆಂಗಳೂರು: ದೈನಂದಿನ ಜೀವನಕ್ಕೆ ನೀರು, ಗಾಳಿ, ಮಣ್ಣು, ಖನಿಜಗಳು, ಮರಗಳು, ಪ್ರಾಣಿಗಳು, ಆಹಾರ ಮತ್ತು ಅನಿಲಗಳಂತಹ ನೈಸರ್ಗಿಕ ಸಂಪನ್ಮೂಲಗಳ ಮೇಲೆ ಎಲ್ಲರು ಅವಲಿಂಭಿತರಾಗಿದ್ದಾರೆ. ಇದನ್ನೆಲ್ಲಾ ಪ್ರಕೃತಿ ನಮಗೆ ನಿಸ್ವಾರ್ಥದಿಂದ ಕೊಡುತ್ತಿದೆ. ಆದರೇ ಮನುಷ್ಯ ಅದನ್ನು ಉಳಿಸಿಕೊಳ್ಳದೆ ತನ್ನ ದುರಾಸೆಗೆ ನಾಶ ಮಾಡುತ್ತಿದ್ದಾನೆ.
ಸ್ಥಿರ ಸಮಾಜಕ್ಕೆ ಅಡಿಪಾಯ ಹಾಕಲು ಆರೋಗ್ಯಕರ ಪರಿಸರ ಮುಖ್ಯ.
ಪ್ರಸ್ತುತ ಮತ್ತು ಭವಿಷ್ಯದ ಪೀಳಿಗೆಗೆ ಪರಿಸರವನ್ನು ಉಳಿಸುವ ಮತ್ತು ಸಂರಕ್ಷಿಸುವ ಸಲುವಾಗಿ ಪ್ರತಿವರ್ಷ ಜುಲೈ 28 ರಂದು ವಿಶ್ವ ಪರಿಸರ ಸಂರಕ್ಷಣಾ ದಿನವನ್ನು ಆಚರಿಸಲಾಗುತ್ತದೆ. ವಿಶ್ವ ಪ್ರಕೃತಿ ಸಂರಕ್ಷಣಾ ದಿನವನ್ನು ಆಚರಿಸುವ ಮುಖ್ಯ ಉದ್ದೇಶ, ಭೂಮಿಯ ನೈಸರ್ಗಿಕ ಪರಿಸರದಲ್ಲಿ ಅಳಿದುಹೋಗುವ ಅಂಚಿನಲ್ಲಿರುವ ಪ್ರಾಣಿಗಳು ಮತ್ತು ಮರಗಳನ್ನು ಸಂರಕ್ಷಿಸುವುದು.
ವಿಶ್ವ ಪ್ರಕೃತಿ ಸಂರಕ್ಷಣಾ ದಿನದ ಇತಿಹಾಸ
ವಿಶ್ವ ಪ್ರಕೃತಿ ಸಂರಕ್ಷಣಾ ದಿನದ ಇತಿಹಾಸ ಮತ್ತು ಮೂಲದ ಬಗ್ಗೆ ಸ್ಪಷ್ಟವಾದ ಮಾಹಿತಿಯಿಲ್ಲ. ಆದರೆ ಪ್ರತಿ ವರ್ಷ ಜುಲೈ 28 ರಂದು ವಿಶ್ವ ಪ್ರಕೃತಿ ಸಂರಕ್ಷಣಾ ದಿನವನ್ನು ಆಚರಣೆ ಮಾಡಲಾಗುತ್ತದೆ. ಈ ದಿನದ ಆಚರಣೆಯ ಮುಖ್ಯ ಉದ್ದೇಶ ಜನರು ಪ್ರಕೃತಿಯನ್ನು ಹೇಗೆ ಬಳಸಿಕೊಳ್ಳುತ್ತಿದ್ದಾರೆ ಎಂಬುದರ ಬಗ್ಗೆ ಆತ್ಮಾವಲೋಕನ ಮಾಡುವುದು. ಮತ್ತು ಅದನ್ನು ಸಂರಕ್ಷಿಸಲು ಕ್ರಮಗಳನ್ನು ತೆಗೆದುಕೊಳ್ಳುವುದಾಗಿದೆ.
ನೈಸರ್ಗಿಕ ಸಂಪನ್ಮೂಲಗಳ ಅತಿಯಾದ ದುರುಪಯೋಗದಿಂದಾಗಿ ಜಾಗತಿಕ ತಾಪಮಾನ ಏರಿಕೆ, ವಿವಿಧ ಸಾಂಕ್ರಾಮೀಕ ರೋಗಗಳು, ಪ್ರಕೃತಿ ವಿಕೋಪಗಳು ಸೇರಿದಂತೆ ಇತ್ಯಾದಿ ಸಮಸ್ಯೆಗಳನ್ನು ಎದುರಿಸುವಂತಾಗಿದೆ. ಹೀಗಾಗಿ ಪ್ರಸ್ತುತ ಅದನ್ನು ತಡೆಯುವುದು ಅನಿವಾರ್ಯವಾಗಿದ್ದು, ಅದನ್ನು ಪ್ರತಿಯೋಬ್ಬರಿಗು ಮನವರಿಕೆ ಮಾಡಿಕೊಡುವುದು ಈ ದಿನದ ಮುಖ್ಯ ಉದ್ದೇಶವಾಗಿದೆ.
ವಿಶ್ವ ಪ್ರಕೃತಿ ಸಂರಕ್ಷಣಾ ದಿನದ ಉದ್ದೇಶ
ವಿಶ್ವ ಪ್ರಕೃತಿ ಸಂರಕ್ಷಣಾ ದಿನವನ್ನು ಆಚರಣೆ ಮಾಡುವ ಮೂಲ ಉದ್ದೇಶ, ಭೂಮಿಯ ನೈಸರ್ಗಿಕ ಪರಿಸರದಲ್ಲಿ ಅಳಿದುಹೋಗುತ್ತಿರುವ ಅಥವಾ ಅಂಚಿನಲ್ಲಿರುವ ಪ್ರಾಣಿಗಳು, ಪಕ್ಷಿಗಳು ಮತ್ತು ಮರಗಳನ್ನು ಸಂರಕ್ಷಿಸುವುದು.
ವಿಶ್ವ ಪ್ರಕೃತಿ ಸಂರಕ್ಷಣಾ ದಿನದ ಮಹತ್ವ
ಪ್ರಕೃತಿಯ ಸಂರಕ್ಷಣ ಬಹಳ ಅವಶ್ಯಕವಾಗಿದೆ. ಜಾಗತಿಕ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಭೂಮಿಯನ್ನು ಸಂಪನ್ಮೂಲಗಳ ಸಂರಕ್ಷಣೆ ಮಾಡುವುದು ಬಹಳ ಮುಖ್ಯವಾಗಿದೆ. ನೀರು, ಗಾಳಿ, ಮಣ್ಣು, ಸಸ್ಯವರ್ಗ, ಖನಿಜಗಳು, ಪ್ರಾಣಿಗಳು ಹೀಗೆ ಪ್ರಕೃತಿಯ ವಿವಿಧ ಸಂಪನ್ಮೂಲಗಳನ್ನು ಸಂರಕ್ಷಿಸುವ ಮೂಲಕ ಭೂಮಿಯ ನೈಸರ್ಗಿಕ ಸಂಪನ್ಮೂಲಗಳನ್ನು ಕಾಪಾಡಿಕೊಳ್ಳುವುದಾಗಿದೆ. ಆರೋಗ್ಯಕರ ಪರಿಸರವು ಸ್ಥಿರ ಮತ್ತು ಉತ್ತಮ ಸಮಾಜಕ್ಕೆ ಅಡಿಪಾಯವಾಗಿದೆ.
ಪ್ರಸ್ತುತ ಹಾಗೂ ಭವಿಷ್ಯದ ಪೀಳಿಗೆಯ ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳಲು ವಿಶ್ವ ಪ್ರಕೃತಿ ಸಂರಕ್ಷಣಾ ದಿನವು ಮಹತ್ವದ ಪಾತ್ರ ವಹಿಸುತ್ತದೆ. ನಮ್ಮ ನೈಸರ್ಗಿಕ ಸಂಪನ್ಮೂಲಗಳನ್ನು ರಕ್ಷಿಸಲು, ಸಂರಕ್ಷಿಸಲು ಮತ್ತು ಸುಸ್ಥಿರವಾಗಿ ಅದನ್ನು ನಿರ್ವಹಿಸಲು ನಾವೆಲ್ಲರೂ ಕೈ ಜೋಡಿಸಬೇಕು. ಆಗ ಮಾತ್ರ ಪರಿಸರದ ಕಾಳಜಿ ಸಾಧ್ಯ. ಅಲ್ಲದೇ ಕೇವಲ ಒಂದು ದಿನಕ್ಕೆ ಮಾತ್ರ ಪರಿಸರ ಉಳಿಸುವ ಮತ್ತು ಮರ-ಗಿಡಗಳನ್ನು ಬೆಳೆಸುವ ಕಾರ್ಯ ಆಗಬಾರದು ಎಂಬ ಕಾಳಜಿ ಇದ್ದರೆ, ನೈಸರ್ಗಿಕ ಸಂಪತ್ತು ಸದಾ ಸಮತೋಲನವನ್ನು ಕಾಯ್ದುಕೊಳ್ಳುತ್ತದೆ.