ನಿಮಗೆ ನೀವೇ ನೀಡಬಹುದಾದ ಅತ್ಯುತ್ತಮ ಔಷಧಿ ಎಂದರೆ ಆರೋಗ್ಯಕರ ಆಹಾರ. ಆಹಾರವೇ ಔಷಧಿಯಾಗಲು ಸಾಧ್ಯವಿಲ್ಲ, ಆದರೆ ಇದು ಖಂಡಿತವಾಗಿಯೂ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ ಮತ್ತು ಸೋಂಕುಗಳು ಮತ್ತು ರೋಗಗಳ ವಿರುದ್ಧ ಹೋರಾಡುವ ನಿಮ್ಮ ದೇಹದ ಸಾಮರ್ಥ್ಯವನ್ನು ಉತ್ತಮಗೊಳಿಸುತ್ತದೆ.
ಡ್ರೈ ಫ್ರೂಟ್ಸ್: ಇದರಲ್ಲಿರುವ ವಿಟಮಿನ್ ಇ ನಿಮ್ಮ ರೋಗನಿರೋಧಕ ಶಕ್ತಿ ಹೆಚ್ಚಿಸಲು ಸಹಾಯ ಮಾಡುತ್ತದೆ, ಇದು ಸೋಂಕುಗಳು ನಿಮ್ಮ ಹತ್ತಿರ ಸುಳಿಯದಂತೆ ನೋಡಿಕೊಳ್ಳುತ್ತದೆ.
ಡ್ರೈ ಫ್ರೂಟ್ಸ್: ಇದರಲ್ಲಿರುವ ವಿಟಮಿನ್ ಇ ನಿಮ್ಮ ರೋಗನಿರೋಧಕ ಶಕ್ತಿ ಹೆಚ್ಚಿಸಲು ಸಹಾಯ ಮಾಡುತ್ತದೆ, ಇದು ಸೋಂಕುಗಳು ನಿಮ್ಮ ಹತ್ತಿರ ಸುಳಿಯದಂತೆ ನೋಡಿಕೊಳ್ಳುತ್ತದೆ.
ಮೊಟ್ಟೆ: ಇದರಲ್ಲಿ ವಿಟಮಿನ್ ಡಿ ಅಗತ್ಯ ಪ್ರಮಾಣದಲ್ಲಿ ಇರುತ್ತದೆ. ಇದನ್ನು ಸೇವಿಸುವುದರಿಂದ ಶ್ವಾಸಕೋಶದ ಸಮಸ್ಯೆಗಳು ಬರುವುದಿಲ್ಲ. ಅಲ್ಲದೇ, ನಿಮ್ಮ ರೋಗನಿರೋಧಕ ಶಕ್ತಿ ಹೆಚ್ಚಿಸಲು ಸಹಾಯ ಮಾಡುತ್ತದೆ.
ದೊಡ್ಡ ಮೆಣಸು: ಈ ದೊಡ್ಡ ಮೆಣಸಿನಲ್ಲಿ ಸಹ ವಿಟಮಿನ್ ಸಿ ಸಮೃದ್ಧವಾಗಿದ್ದು, ಇದನ್ನು ವಿವಿಧ ರೀತಿಯ ಆಹಾರಗಳಲ್ಲಿ ಬಳಸುವುದು ಸಹಾಯ ಮಾಡುತ್ತದೆ.
ಡಾರ್ಕ್ ಚಾಕೊಲೇಟ್: ಥಿಯೋಬ್ರೋಮಿನ್ ಎಂಬ ಆ್ಯಂಟಿ ಆಕ್ಸಿಡೆಂಟ್ ಅನ್ನು ಈ ಡಾರ್ಕ್ ಚಾಕೊಲೇಟ್ ಹೊಂದಿರುತ್ತದೆ, ಇದು ಶೀತ ಮತ್ತು ಕೆಮ್ಮಿನ ಸಮಸ್ಯೆಯನ್ನು ನಿವಾರಿಸಲು ಸಹಾಯ ಮಾಡುತ್ತದೆ.
ಬೆರ್ರಿ ಹಣ್ಣುಗಳು: ಈ ಬೆರ್ರಿ ಹಣ್ಣುಗಳು ಫ್ಲೇವನಾಯ್ಡ್ನಂತಹ ಆ್ಯಂಟಿ ಆಕ್ಸಿಡೆಂಟ್ಗಳನ್ನು ಹೊಂದಿರುತ್ತದೆ. ಉಸಿರಾಟದ ಕಾಯಿಲೆಗಳು ಸೇರಿದಂತೆ ರೋಗನಿರೋಶಕ ಶಕ್ತಿ ಹೆಚ್ಚಿಸುವಲ್ಲಿ ಇದು ಪ್ರಮುಖ ಪಾತ್ರವಹಿಸುತ್ತದೆ.
ಸಿಟ್ರಸ್ ಹಣ್ಣುಗಳು: ಕಿತ್ತಳೆ ಹಣ್ಣು, ನಿಂಬೆ ಸೇರಿದಂತೆ ಸಿಟ್ರಸ್ ಹೆಚ್ಚಿರುವ ಹಣ್ಣುಗಳು ರೋಗನಿರೋಧಕ ಶಕ್ತಿ ಹೆಚ್ಚಿಸಲು ಸಹಕಾರಿ. ವಿಟಮಿನ್ ಸಿ ಸೋಂಕುಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.