ಖರ್ಜೂರವನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಿಂದರೆ ಏನಾಗುತ್ತದೆ ಎಂಬುದನ್ನು ತಿಳಿಯಿರಿ.
ಖರ್ಜೂರವನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ತೂಕವನ್ನು ಸುಲಭವಾಗಿ ಕಳೆದುಕೊಳ್ಳಬಹುದು. ಯಾಕೆಂದರೆ ಇದರಲ್ಲಿ ಫೈಬರ್ ಹೆಚ್ಚಾಗಿದ್ದು, ಇದು ಹಸಿವನ್ನು ಕಡಿಮೆ ಮಾಡುತ್ತದೆ. ಇದರಿಂದ ಅತಿಯಾಗಿ ತಿನ್ನುವುದನ್ನು ತಪ್ಪಿಸಬಹುದು. ಹಾಗೇ ಇದರಿಂದ ಜೀರ್ಣಕ್ರಿಯೆ ಚೆನ್ನಾಗಿ ಆಗುತ್ತದೆ ಮತ್ತು ಮಲಬದ್ಧತೆ ಸಮಸ್ಯೆ ಕಾಡುವುದಿಲ್ಲ.
ಹಾಗೇ ಖರ್ಜೂರದಲ್ಲಿ ಕಬ್ಬಿಣಾಂಶ ಹೆಚ್ಚಾಗಿರುವ ಕಾರಣ ಇದನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ದೇಹದಲ್ಲಿ ಹಿಮೋಗ್ಲೋಬಿನ್ ಹೆಚ್ಚಾಗುತ್ತದೆ. ಇದು ರಕ್ತಹೀನತೆ ಸಮಸ್ಯೆಯನ್ನು ನಿವಾರಿಸುತ್ತದೆ. ಹಾಗಾಗಿ ಇದು ಗರ್ಭಿಣಿಯರಿಗೂ ಉತ್ತಮ. ಹಾಗಾಗಿ ಗರ್ಭಿಣಿಯರು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ 1-2 ಖರ್ಜೂರವನ್ನು ಸೇವಿಸಿ