ಬೆಂಗಳೂರು: ಪ್ರತಿಪಕ್ಷ ಬಿಜೆಪಿ ವಿರುದ್ಧ ಕಾಂಗ್ರೆಸ್ ಸರ್ಕಾರ SIT ಅಸ್ತ್ರ ಪ್ರಯೋಗ ಮಾಡಲು ಮುಂದಾಗಿದೆ.ಕೋವಿಡ್ ಹಗರಣ, PSI ಹಗರಣ,ನೀರಾವರಿ ಕಾಮಗಾರಿ ಹಗರಣ ಸೇರಿದಂತೆ ಬಿಜೆಪಿ ಸರ್ಕಾರದಲ್ಲಿ ನಡೆದಿದೆ ಎನ್ನಲಾದ ಹಗರಣಗಳನ್ನ ತನಿಖೆ ನಡೆಸಲು ಸರ್ಕಾರ ಮುಂದಾಗಿದೆ.ಈ ಮೂಲಕ ಬಿಜೆಪಿಯನ್ನ ಕಟ್ಟಿಹಾಕಲು ಕಾಂಗ್ರೆಸ್ ಸರ್ಕಾರ ಮಾಸ್ಟರ್ ಪ್ಲಾನ್ ಮಾಡಿದೆ.
ಯೆಸ್,ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾಗುತ್ತಿದ್ದಂತೆ ಒಂದಲ್ಲಾ ಒಂದು ವಿಚಾರದಲ್ಲಿ ಪ್ರತಿಪಕ್ಷ ಬಿಜೆಪಿಗೆ ಶಾಕ್ ನೀಡುತ್ತಿದೆ.ಪಠ್ಯಪುಸ್ತಕ ಪರಿಷ್ಕರಣೆಗೆ ಕೊಕ್,ಮತಾಂತರ ನಿಷೇಧ ಕಾಯ್ದೆ ವಾಪಸ್ ಸೇರಿದಂತೆ ಬಿಜೆಪಿ ಸರ್ಕಾರದಲ್ಲಿ ತೆಗದುಕೊಂಡಿದ್ದ ನಿರ್ಧಾರಗಳಿಗೆ ಕಾಂಗ್ರೆಸ್ ಸರ್ಕಾರ ಗೇಟ್ ಪಾಸ್ ನೀಡಿತ್ತು.ಇದೀಗ ಮತ್ತೊಂದು ಹೆಜ್ಜೆ ಮುಂದೆ ಹೋಗಿರುವ ಸಿಎಂ ಸಿದ್ದರಾಮಯ್ಯ,ಬಿಜೆಪಿ ಅವಧಿಯಲ್ಲಿ ನಡೆದ ಹಗರಣಗಳನ್ನ ತನಿಖೆಗೆ ನೀಡಲು ಮುಂದಾಗಿದೆ.ಬಿಜೆಪಿ ಸರ್ಕಾರದ ಹಗರಣಗಳನ್ನ ತನಿಖೆ ನಡೆಸಲು SIT ರಚನೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಇಂದು ಘೋಷಣೆ ಮಾಡಿದ್ದಾರೆ.
ಈ ಬಗ್ಗೆ ಹಾಸನದಲ್ಲಿ ಮಾತನಾಡಿರುವ ಸಿಎಂ ಸಿದ್ದರಾಮಯ್ಯ ಬಿಜೆಪಿ ಅವಧಿಯಲ್ಲಿ ನಡೆದ ಎಲ್ಲಾ ಹಗರಣಗಳ ಬಗ್ಗೆ ತನಿಖೆ ಮಾಡುತ್ತೇವೆ. ಅವ್ಯವಹಾರಗಳು ನಡೆದಿರುವ ಬಗ್ಗೆ ದೂರುಗಳು ಕೇಳಿಬಂದಿವೆ, ಅವರ ಅವದಿಯಲ್ಲಿ 4 ಮೆಡಿಕಲ್ ಕಾಲೇಜು ಕಟ್ಟಿದ್ದಾರೆ ,ಅದರಲ್ಲೂ ಸಹ ಅವ್ಯವಹಾರ ಕೇಳಿ ಬಂದಿದೆ. ಕೊರೊನಾ ಟೈಂನಲ್ಲಿ ಅನೇಕ ಸಾಮಾಗ್ರಿಗಳನ್ನು ಖರೀದಿ ಮಾಡಿ ಅದರಲ್ಲಿ ಅವ್ಯವಹಾರ ನಡೆದಿದೆ. ಹಾಗೆಯೆ ನೀರಾವರಿಯಲ್ಲಿ ಅವ್ಯವಹಾರ, ಬಿಟ್ ಕಾಯಿನ್ ಹಗರಣ ನಡೆದಿದ್ದು, ಪಿಐಎಸ್ಐ ಹಗರಣದಲ್ಲಿ ಚುರುಕು ತನಿಖೆ ಮಾಡ್ತಿವಿ ಎಂದು ಸಿಎಂ ಹೇಳಿದ್ದಾರೆ.
ಇನ್ನು ಕೋವಿಡ್ ಹಗರಣ ಸಂಬಂಧಪಟ್ಟಂತೆ ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಎರಡು ಬಾರಿ ಸಭೆ ನಡೆಸಿದ್ರೆ,ಬಿಟ್ ಕಾಯಿನ್ ಹಗರಣ ಬಗ್ಗೆ ಗೃಹ ಸಚಿವ ಜಿ.ಪರಮೇಶ್ವರ್ ಮೂರು ಬಾರಿ ಸಭೆ ನಡೆಸಿದ್ದಾರೆ.ಈ ಹಿನ್ನಲೆಯಲ್ಲಿ ನಾಳೆ ನಡೆಯುವ ಕ್ಯಾಬಿನೆಟ್ ಸಭೆಯಲ್ಲಿ ಈ ಬಗ್ಗೆ SIT ತನಿಖೆ ನೀಡುವ ಬಗ್ಗೆ ಅಂತಿಮ ತೀರ್ಮಾನ ತೆಗದುಕೊಳ್ಳಲು ಸರ್ಕಾರ ಮುಂದಾಗಿದೆ.
ಒಟ್ಟಾರೆ,ಬಿಜೆಪಿ ಸರ್ಕಾರದಲ್ಲಿ ನಡೆದ ಅವ್ಯವಹಾರಗಳಿಗೆ ತಾರ್ಕಿಕ ಅಂತ್ಯ ಕಾಣಿಸುವುದಾಗಿ ಕಾಂಗ್ರೆಸ್ ಸರ್ಕಾರ ಘೋಷಣೆ ಮಾಡಿದೆ.ಇದು ಕೇವಲ ಆರಂಭ ಶೂರತ್ವನಾ..?ನಿಜವಾಗಲೂ ತಪಿತಸ್ಥರಿಗೆ ಶಿಕ್ಷೆ ಕೊಡಿಸುತ್ತಾರಾ ಅನ್ನೋದನ್ನ ಕಾದು ನೋಡಬೇಕಿದೆ.