ಬೆಂಗಳೂರು: ಗೃಹಜ್ಯೋತಿಯಡಿ ಆಶ್ವಾಸನೆಯಂತೆ ಉಚಿತ ವಿದ್ಯುತ್ ನೀಡಲಾಗುತ್ತದೆ ಎಂದು ಸಚಿವ ಕೆಜೆ ಜಾರ್ಜ್ ಹೇಳಿದ್ದಾರೆ.
ಬಳ್ಳಾರಿ ಶಾಖೋತ್ಪನ್ನ ವಿದ್ಯುತ್ ಕೇಂದ್ರಕ್ಕೆ ಸೋಮವಾರ ಭೇಟಿ ನೀಡಿದ ಅವರು ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದರು.
ಗೃಹಜ್ಯೋತಿ ಯೋಜನೆಯನ್ನು ಜುಲೈಯಿಂದಲೇ ಅನುಷ್ಠಾನಗೊಳಿಸಲಾಗುವುದು. 200 ಯೂನಿಟ್ಗಿಂತ ಕಡಿಮೆ ವಿದ್ಯುತ್ ಬಳಕೆ ಮಾಡುವವರಿಗೆ ಆಗಸ್ಟ್ ತಿಂಗಳಿಂದ ಜನರಿಗೆ ಶೂನ್ಯ ಬಿಲ್ ನೀಡಲಾಗುತ್ತದೆ. ಅದಕ್ಕಿಂತ ಹೆಚ್ಚಿನ ಯೂನಿಟ್ ಬಳಸಿದಲ್ಲಿ ಬಳಕೆ ಮಾಡಿದ ವಿದ್ಯುತ್ ಬಿಲ್ ಪೂರ್ಣ ಪಾವತಿಸಬೇಕಾಗುತ್ತದೆ” ಎಂದು ತಿಳಿಸಿದರು.
ರಾಜ್ಯದಲ್ಲಿ 2.16 ಕೋಟಿ ಜನರು ಗೃಹಜ್ಯೋತಿ ಯೋಜನೆ ಫಲಾನುಭವಿಗಳಿದ್ದು, ಅದರಲ್ಲಿ 2.14 ಕೋಟಿ ಜನರು ಅರ್ಹರಿದ್ದಾರೆ. ನಾವು ನೀಡಿದ ಆಶ್ವಾಸನೆಯಂತೆ ಜನರಿಗೆ ಉಚಿತ ವಿದ್ಯುತ್ ನೀಡಲಾಗುವುದು ಎಂದು ಹೇಳಿದ್ದಾರೆ.