ಬೆಂಗಳೂರು : ಜಲಸಂಪನ್ಮೂಲ ಇಲಾಖೆಗೆ 1 ಲಕ್ಷ ಕೋಟಿ ಹಣ ಮೀಸಲಿಡಲಾಗಿದ್ದು, 10 ನೀರಾವರಿ ಯೋಜನೆ ಪೂರ್ಣಗೊಳಿಸಲು 940 ಕೋಟಿ ಮೀಸಲಿಡಲಾಗಿದೆ.
ಕುಡಿಯುವ ನೀರು ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಅನುದಾನ ಘೋಷಿಸಲಾಗಿದ್ದು, 172 ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಸರ್ಕಾರ ನಿರ್ಧಾರ ಮಾಡಿದೆ. 19 ಕೆರೆಗಳಿಗೆ ನೀರು ತುಂಬಿಸಲು 770 ಕೋಟಿ ಹಣ ಮೀಸಲಿಡಲಾಗಿದೆ.
ಬೆಳಗಾವಿ, ದಾವಣಗೆರೆ, ಬಳ್ಳಾರಿ, ಹಾವೇರಿ, ಗದಗ, ಬೀದರ್, ಉತ್ತರ ಕನ್ನಡ, ವಿಜಯನಗರ, ಕೊಪ್ಪಳ, ಕಲಬುರಗಿ ಹಾಗೂ ಯಾದಗಿರಿ ಸೇರಿ ಒಟ್ಟು 823,99 ಕೆರೆಗಳನ್ನು ತುಂಬಿಸಲು ನಿರ್ಧಾರ ಮಾಡಲಾಗಿದೆ.
ಕುಲಹಳ್ಳಿ-ಹನ್ನೂರು, ತಿಮ್ಮಾಪುರ, ಸಸಾಲಟ-ಶಿವಲಿಂಗೇಶ್ವರ ಮತ್ತು ಮಂಟೂರು ಮಹಾಲಕ್ಷ್ಮಿ ಏತ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು. 770 ಕೋಟಿ ರೂ. ವೆಚ್ಚದಲ್ಲಿ 899 ಕೆರೆ ತುಂಬಿಸುವ 19 ಯೋಜನೆಗಳನ್ನು ಪೂರ್ಣಗೊಳಿಸಲು ಕ್ರಮ ತೆಗೆದುಕೊಳ್ಳಲಾಗುವುದು ಎಂದರು.
ಕುಡಿಯುವ ನೀರು ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಸರ್ಕಾರ ಮುಂದಾಗಿದ್ದು, 172 ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಸರ್ಕಾರ ನಿರ್ಧರಿಸಿದೆ. 19 ಕೆರೆಗಳಿಗೆ ನೀರು ತುಂಬಿಸಲು 770 ಕೋಟಿ ಹಣ ಮೀಸಲು ಇಡಲಾಗಿದೆ. ಬೆಳಗಾವಿ, ದಾವಣಗೆರೆ, ಬಳ್ಳಾರಿ, ಹಾವೇರಿ, ಗದಗ, ಬೀದರ್, ಉತ್ತರ ಕನ್ನಡ, ವಿಜಯನಗರ, ಕೊಪ್ಪಳ, ಕಲಬುರಗಿ ಹಾಗೂ ಯಾದಗಿರಿ ಸೇರಿ ಒಟ್ಟು 823,99 ಕೆರೆಗಳನ್ನು ತುಂಬಿಸಲು ನಿರ್ಧಾರ ಮಾಡಲಾಗಿದೆ.
ಹಿಂದಿನ ಸರ್ಕಾರದ ನೀರಾವರಿ ಯೋಜನೆಯನ್ನ ಕೈ ಬಿಡಲು ಸರ್ಕಾರ ನಿರ್ಧಾರ ಮಾಡಿದೆ. 19 ಕೆರೆ ತುಂಬಿಸು ಯೋಜನೆಗೆ ಬರೊಬ್ಬರಿ 770 ಕೋಟಿ ರೂಪಾಯಿ ಮೀಸಲಿಡಲಾಗಿದೆ. ಯಾದಗಿರಿ ಸೇರಿ 15 ಜಿಲ್ಲೆಯ 99 ಕೆರೆಗಳಿಗೆ ನೀರು ತುಂಬಿಸಲು ಯೋಜನೆ ಜಾರಿ ಮಾಡಲಾಗಿದ್ದು, ಎತ್ತಿನ ಹೊಳೆ ಯೋಜನೆಗೆ ಪರಿಷ್ಕೃತ ಮೊತ್ತ 22,252 ಕೋಟಿ ಮೀಸಲಿಡಲಾಗಿದೆ. ಇನ್ನು ಮೇಕೆದಾಟು ಯೋಜನೆಗೆ ಭೂಸ್ವಾಧಿನ ಪ್ರಕ್ರಿಯೆಗೆ ಚಾಲನೆ ನೀಡಲು ನಿರ್ಧಾರ ಮಾಡಲಾಗಿದೆ.