ಬಾಲರಾಮನ ಪ್ರಾಣಪ್ರತಿಷ್ಠೆ ಸಂಪನ್ನಗೊಂಡಿದ್ದು, ಬರೋಬ್ಬರಿ 500 ವರ್ಷಗಳ ಕಾಯುವಿಕೆಗೆ ಇದೀಗ ಅಂತ್ಯ ಬಿದ್ದಿದೆ. ಅಯೋಧ್ಯೆ ರಾಮಮಂದಿರದಲ್ಲಿ ಮಧ್ಯಾಹ್ನ 12 ಗಂಟೆ 30 ನಿಮಿಷ 32 ಸೆಕೆಂಡ್ಗಳ ಮಧ್ಯೆ ಅಭಿಜಿತ್ ಮುಹೂರ್ತದಲ್ಲಿ ಶಾಸ್ತ್ರೋಕ್ತವಾಗಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ನೆರವೇರಿದೆ.
ಅರ್ಚಕರು, ಪಂಡಿತರು ಹಾಗೂ ಯಜಮಾನ ಸ್ಥಾನದಲ್ಲಿದ್ದ ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಪ್ರಾಣಪ್ರತಿಷ್ಠೆ ನೆರವೇರಿದೆ. ದೇಶದ ಮೂಲೆ ಮೂಲೆಗಳಿಂದ ಸುಮಾರು 8 ಸಾವಿರಕ್ಕೂ ಅಧಿಕ ಗಣ್ಯರನ್ನ ಆಹ್ವಾನಿಸಲಾಗಿತ್ತು.ಅಂತೆಯೇ ಮುಕೇಶ್ ಅಂಬಾನಿ ಕುಟುಂಬಸ್ಥರು ಸಹ ಈ ಸಂಪನ್ನ ಕಾರ್ಯಕ್ರಮದಲ್ಲಿ ಭಾಗಿಯಾಗಿ ಸಂತಸ ಹಂಚಿಕೊಂಡರು.
ಕನ್ನಡದ ಹೆಸರಾಂತ ನಟ, ನಿರ್ದೇಶಕ ರಿಷಬ್ ಶೆಟ್ಟಿ, ಅನಿಲ್ ಕುಮಾರ ಸ್ವಾಮಿ, ಬಾಲಿವುಡ್ ಖ್ಯಾತ ನಟ ಅಮಿತಾಬ್ ಬಚ್ಚನ್, ತೆಲುಗು ನಟರಾದ ಚಿರಂಜೀವಿ, ರಾಮ್ಚರಣ್, ಪವನ್ ಕಲ್ಯಾಣ್ ಬಾಲಿವುಡ್ ಖ್ಯಾತ ನಟಿ ಕಂಗನಾ ರಣಾವತ್ತ್, ಕತ್ರಿನಾ ಕೈಫ್ ಸೇರಿದಂತೆ ಅನೇಕ ನಟ ನಟಿಯರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಕೇವಲ ಸಿನಿಮಾ ನಟರು ಮಾತ್ರವಲ್ಲ, ಕ್ರೀಡಾ ತಾರೆ ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ, ವೆಂಕಟೇಶ್ ಪ್ರಸಾದ್, ಆರ್.ಅಶ್ವಿನ್, ಸೈನಾ ನೆಹ್ವಾಲ್ ಸೇರಿದಂತೆ ಅನೇಕರು ಈ ಸಂಪನ್ನ ಕಾರ್ಯಕ್ರಮದಲ್ಲಿ ಭಾಗಿಯಾಗಿ ಸಂತಸ ಹಂಚಿಕೊಂಡರು.