ಮಧುಮೇಹದಲ್ಲಿ ನಾವು ಸೇವಿಸುವ ಆಹಾರವು ರಕ್ತದಲ್ಲಿನ ಸಕ್ಕರೆಯ ಮೇಲೆ ಪರಿಣಾಮ ಬೀರುತ್ತದೆ. ಆಹಾರವನ್ನು ಸೇವಿಸಿದ ತಕ್ಷಣ ರಕ್ತದಲ್ಲಿನ ಸಕ್ಕರೆಯು ಹೆಚ್ಚಾಗಲು ಪ್ರಾರಂಭಿಸುತ್ತದೆ. ಹಾಗಾಗಿ ಆಹಾರ ಸೇವಿಸಿದ ನಂತರ ಏನು ಮಾಡಬೇಕು ಎಂಬುದನ್ನೂ ತಿಳಿದುಕೊಳ್ಳಬೇಕು
ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಇದು ಪರಿಪೂರ್ಣ ಔಷಧಿ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಆಹಾರ ಸೇವಿಸಿದ ನಂತರ ಸ್ವಲ್ಪ ಅಜ್ವೈನ್ ಅಥವಾ ಓಂ ಕಾಳು ಬಾಯಿಗೆ ಹಾಕಿಕೊಳ್ಳುವುದರಿಂದ ಸಕ್ಕರೆ ಹೆಚ್ಚಾಗುವುದನ್ನು ನಿಯಂತ್ರಿಸಬಹುದು ಎಂದು ಹೇಳಲಾಗುತ್ತದೆ.
ಅಜ್ವೈನ್ ಪ್ರೋಟೀನ್, ಕೊಬ್ಬು, ಫೈಬರ್ ಮತ್ತು ಕಾರ್ಬೋಹೈಡ್ರೇಟ್ನಂತಹ ಪೋಷಕಾಂಶಗಳನ್ನು ಒಳಗೊಂಡಿದೆ. ಇದರಲ್ಲಿರುವ ಫೈಬರ್ ದೇಹದಲ್ಲಿನ ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಊಟದ ನಂತರ ಇದನ್ನು ನಿಯಮಿತವಾಗಿ ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಣದಲ್ಲಿಡುತ್ತದೆ.
ನಿಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಅಜ್ವೈನ್ ಉತ್ತಮವಾಗಿವೆ. ಮಧುಮೇಹಿಗಳು ಅಜ್ವೈನ್ ತೆಗೆದುಕೊಳ್ಳುವುದರಿಂದ ಉತ್ತಮ ಫಲಿತಾಂಶವನ್ನು ಪಡೆಯುತ್ತಾರೆ. ಏಕೆಂದರೆ ಇದು ಫೈಬರ್ನಲ್ಲಿ ಸಮೃದ್ಧವಾಗಿದೆ. ಫೈಬರ್ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇವುಗಳನ್ನು ನಿಮ್ಮ ಆಹಾರದಲ್ಲಿ ಸೇರಿಸಿಕೊಳ್ಳುವ ಮೂಲಕ ಮಧುಮೇಹವನ್ನು ನಿಯಂತ್ರಿಸಬಹುದು.
ನಿಮ್ಮ ದೈನಂದಿನ ಆಹಾರದ ಭಾಗವಾಗಿ ಅಜ್ವೈನ್ ಅನ್ನು ಸೇವಿಸುವುದರಿಂದ ಉತ್ತಮ ಫಲಿತಾಂಶವನ್ನು ನೀಡುತ್ತದೆ. ಒಂದು ಲೋಟ ನೀರಿನಲ್ಲಿ ಒಂದು ಚಮಚ ಅಜ್ವೈನ್ ಹಾಕಿ ಕುದಿಸಿ. ಅದನ್ನು ಫಿಲ್ಟರ್ ಮಾಡಿ ಮತ್ತು ಊಟದ ನಂತರ 40 ನಿಮಿಷ ಬಳಿಕ ಕುಡಿಯಿರಿ. ಇದನ್ನು ನಿಯಮಿತವಾಗಿ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ನಿಯಂತ್ರಣದಲ್ಲಿರುತ್ತದೆ.
ಪ್ರತಿದಿನ ಅಜ್ವೈನ್ ಸೇವಿಸುವುದರಿಂದ ತೂಕವನ್ನು ಕಳೆದುಕೊಳ್ಳಬಹುದು. ಮಧುಮೇಹ ಇದ್ದಾಗ ದೇಹದ ಚಯಾಪಚಯ ಕ್ರಿಯೆಯು ಸರಿಯಾಗುವುದಿಲ್ಲ