ಬೆಂಗಳೂರು: ಅವಧಿ ಮೀರಿದ ಇಂಜಕ್ಷನ್ ನೀಡಿ ಮೂರು ವರ್ಷದ ಕಂದಮ್ಮ ಆಸ್ಪತ್ರೆಯಲ್ಲಿ ದಾಖಲಾಗುವಂತೆ ಮಾಡಿದ ಬೆಂಗಳೂರಿನ ಸಂಜೀವಿನಿ ಆಸ್ಪತ್ರೆ ವಿರುದ್ಧ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಎರಡು ವರ್ಷದ ಯಾದ್ವಿ ಎಂಬ ಹೆಣ್ಣುಮಗುವನ್ನು ಪೋಷಕರು ಸಂಜೀವಿನಿ ಆಸ್ಪತ್ರೆಗೆ ಕೊಂಡೊಯ್ದಿದ್ದರು. ಈ ವೇಳೆ ಜ್ವರ ಹೆಚ್ಚಾಗಿದ್ದರಿಂದ ವೈದ್ಯರು, ಡ್ರಿಪ್ಸ್ ಮೂಲಕ ಇಂಜೆಕ್ಷನ್ ನೀಡಿದ್ದರು. ಈ ವೇಳೆ ಮಗುವಿನ ಆರೋಗ್ಯದಲ್ಲಿ ಏರುಪೇರಾಗಿದ್ದು, ಕೂಡಲೇ ಬೇರೊಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಇದೇ ವೇಳೆ ಸಂಜೀವಿನಿ ಆಸ್ಪತ್ರೆಯ ಸಿಬ್ಬಂದಿಗಳು ಹಣದ ಆಮಿಷ ಒಡ್ಡಿರುವ ಆರೋಪ ಕೇಳಿಬಂದಿದೆ. ಅಸ್ಪತ್ರೆಯ ವೈದ್ಯರ ನಿರ್ಲಕ್ಷ್ಯ ವಿರುದ್ಧ ಮಗುವಿನ ತಂದೆ ಕಿರಣ್ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ.