ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರದ(Congress Government) ಮಹತ್ವಾಕಾಂಕ್ಷಿ ಶಕ್ತಿ ಯೋಜನೆಗೆ ಸಿಎಂ ಸಿದ್ದರಾಮಯ್ಯ(Siddaramaiah) ಚಾಲನೆ ನೀಡಿದ್ದು ರಾಜ್ಯಾದ್ಯಂತ ಮಹಿಳೆಯರು ಫುಲ್ ಖುಷ್ ಆಗಿದ್ದಾರೆ. ಈ ಬಗ್ಗೆ ಕುಮಾರಸ್ವಾಮಿ ಏನ್ ಹೇಳಿದ್ದಾರೆ ಗೊತ್ತಾ ಇಲ್ಲಿದೆ ನೋಡಿ.
ಕಾಂಗ್ರೆಸ್ ಸರ್ಕಾರದಿಂದ ಐದು ಗ್ಯಾರಂಟಿಗಳ ಜಾರಿ ವಿಚಾರಕ್ಕೆ ಸಂಬಂಧಿಸಿ ಕಾಂಗ್ರೆಸ್ನ ಗ್ಯಾರಂಟಿಗಳ ಬಗ್ಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ. ಆ ಬಗ್ಗೆ ಚರ್ಚೆ ಮಾಡುವುದಕ್ಕೆ ಇನ್ನೂ ಸಮಯವಿದೆ ಎಂದು ಹೆಚ್ಡಿ ಕುಮಾರಸ್ವಾಮಿ ಹೇಳಿದರು. ಯಾವುದೇ ಕಾರ್ಯಕ್ರಮಕ್ಕೆ ಹಣ ಒದಗಿಸುವುದು ಕಷ್ಟವಲ್ಲ. ಫಲಾನುಭವಿಗಳಿಗೆ ಎಷ್ಟರಮಟ್ಟಿಗೆ ತಲುಪುತ್ತದೆ ಎಂಬುದು ಮುಖ್ಯ. ಬಾಡಿಗೆದಾರರಿಗೆ ಅಗ್ರಿಮೆಂಟ್ ಪೇಪರ್ ಕೊಡಲ್ಲವೆಂದು ಹೇಳ್ತಿದ್ದಾರೆ. ವಿದ್ಯುತ್ ದರ ಏರಿಕೆಗೆ 2 ರಾಷ್ಟ್ರೀಯ ಪಕ್ಷಗಳು ಕಾರಣ. 2017-18ರಲ್ಲೇ ಮುಂದೆ ಆಗುವ ಅನಾಹುತ ಬಗ್ಗೆ ನಾನು ಹೇಳಿದ್ದೆ ಎಂದರು.