ಮೈಸೂರು: ಕುಟುಂಬ ಸಮೇತ ಸಾಮಾನ್ಯರಂತೆ ಮತದಾನ ಕೇಂದ್ರಕ್ಕೆ ಬಂದ ಡಾಲಿ ಧನಂಜಯ್ (Dolly Dhananjay) ಮತದಾನ (Voting) ಮಾಡಿದ್ದಾರೆ. ಸಹೋದರಿ, ಸಹೋದರ ಸೇರಿದಂತೆ ಕುಟುಂಬದ ಸದಸ್ಯರೊಂದಿಗೆ ಅರಸಿಕೆರೆ ತಾಲ್ಲೂಕು ಕಾಳೇನಹಳ್ಳಿ ಮತದಾನ ಕೇಂದ್ರಕ್ಕೆ ಆಗಮಿಸಿದ್ದ ಧನಂಜಯ್, ಸರದಿ ಸಾಲಿನಲ್ಲಿ ನಿಂತು ಮತದಾನ ಮಾಡಿದ್ದಾರೆ.
ಬಿಳಿ ಶರ್ಟ್ ಹಾಗೂ ಲುಂಗಿ ಧರಿಸಿದ್ದ ಧನಂಜಯ್, ತಾವು ಕಲಿತಿದ್ದ ಶಾಲೆಯಲ್ಲೇ ಮತದಾನ ಮಾಡಿ ಸಂಭ್ರಮಿಸಿದ್ದರು. ಅದೇ ಸಮಯದಲ್ಲಿ ಆಗಮಿಸಿದ್ದ ಅಭಿಮಾನಿಗಳ ಜೊತೆ ಸೆಲ್ಫಿಗೆ ಸಹಕರಿಸಿದರು. ನೆಚ್ಚಿನ ನಟನ ಜೊತೆ ಅನೇಕರು ಫೋಟೋ ತಗೆಸಿಕೊಂಡು ಖುಷಿ ಪಟ್ಟರು. ಮತದಾನ ಎಷ್ಟು ಶ್ರೇಷ್ಠ ಎನ್ನುವ ಕುರಿತು ಡಾಲಿ ಮಾತನಾಡಿದರು.
ಬೆಳಗ್ಗೆ 7 ಗಂಟೆಯಿಂದಲೇ ವಿಧಾನಸಭೆ ಚುನಾವಣೆಯ ಮತದಾನ ಪ್ರಕ್ರಿಯೆ ಶುರುವಾಗಿದ್ದು, ದಿನದ ಮೊದಲರ್ಧದಲ್ಲೇ ಸ್ಯಾಂಡಲ್ ವುಡ್ (Sandalwood) ನ ಬಹುತೇಕ ನಟ (Actor)-ನಟಿಯರು (Actress) ಹಾಗೂ ತಂತ್ರಜ್ಞರು ಮತದಾನ ಮಾಡುವ ಮೂಲಕ ಇತರರಿಗೆ ಪ್ರೇರಣೆಯಾಗಿದ್ದಾರೆ. ತಮ್ಮ ಹಕ್ಕನ್ನು ಚಲಾಯಿಸುವುದರ ಜೊತೆಗೆ ಅಭಿಮಾನಿಗಳಿಗೆ ಸಂದೇಶವನ್ನೂ ಸಾರಿದ್ದಾರೆ.
ನಟ ಯಶ್ ಕತ್ರಿಗುಪ್ಪೆಯಲ್ಲಿ ಮತದಾನ ಮಾಡಿದರೆ, ಸುದೀಪ್ ಪುಟ್ಟೇನಹಳ್ಳಿ, ಶಿವರಾಜ್ ಕುಮಾರ್ ಬ್ಯಾಟರಾಯನ ಪುರ (ರಾಚೇನಹಳ್ಳಿ), ರವಿಚಂದ್ರನ್ ರಾಜಾಜಿನಗರ, ಉಪೇಂದ್ರ ಕತ್ರಿಗುಪ್ಪೆ, ಧ್ರುವ ಸರ್ಜಾ ತ್ಯಾಗರಾಜನಗರ(ಶಾಸ್ರ್ತಿ ನಗರ), ರಾಘವೇಂದ್ರ ರಾಜ್ ಕುಮಾರ್ ಸದಾಶಿವನಗರ, ಅಶ್ವಿನಿ ಪುನೀತ್ ರಾಜ್ ಕುಮಾರ್ ಸದಾಶಿವನಗರ, ರಾಧಿಕ ಪಂಡಿತ್ ದೇವಯ್ಯ ಪಾರ್ಕ್, ಸುಧಾರಾಣಿ ಮಲ್ಲೇಶ್ವರಂ, ರಕ್ಷಿತಾ ಪ್ರೇಮ್ ಚಂದ್ರ ಲೇಔಟ್ ಪ್ರೇಮ್ ಚಂದ್ರ ಲೇಔಟ್ ನಲ್ಲಿ ತಮ್ಮ ಮತದಾನ ಮಾಡಿದ್ದಾರೆ.
ಅಮೂಲ್ಯ ಆರ್ ಆರ್ ನಗರದಲ್ಲಿ ಮತದಾನ ಮಾಡಿದರೆ, ನೆನಪಿರಲಿ ಪ್ರೇಮ್ ಆರ್ ಆರ್ ನಗರ, ರಚಿತಾ ರಾಮ್ ಆರ್ ಆರ್ ನಗರ, ಮೇಘನಾ ಸರ್ಜಾ ಜೆಪಿ ನಗರ, ತಾರಾ ಜೆ ಪಿ ನಗರ, ದ್ವಾರಕೀಶ್ ಬೊಮ್ಮನಹಳ್ಳಿ, ಸೃಜನ್ ಲೋಕೇಶ್ ಕತ್ರಿಗುಪ್ಪೆ, ಅಜಯ್ ರಾವ್ ರಾಜಾಜಿನಗರ, ಬಿ.ಸರೋಜದೇವಿ ಮಲ್ಲೇಶ್ವರಂ, ಹರ್ಷಿಕಾ ಪೂಣಚ್ಚ ಕೆ ಆರ್ ಪುರ, ಪೂಜಾ ಗಾಂಧಿ ಕತ್ರಿಗುಪ್ಪೆ, ಯೋಗರಾಜ್ ಭಟ್ ಗಿರಿ ನಗರ, ಅನಂತ್ ನಾಗ್ ಮಲ್ಲೇಶ್ವರಂ ಮತ ಕೇಂದ್ರಗಳಲ್ಲಿ ತಮ್ಮ ಮತದಾನ ಮಾಡಿದ್ದಾರೆ.
ಷಬ್ ಶೆಟ್ಟಿ ಕೆರಾಡಿ, ಕುಂದಾಪುರ, ರಕ್ಷಿತ್ ಶೆಟ್ಟಿ ಉಡುಪಿ, ರಾಜ್ ಬಿ ಶೆಟ್ಟಿ ಉಡುಪಿ, ನಿಖಿಲ್ ಕುಮಾರಸ್ವಾಮಿ ಕೇತಗನಹಳ್ಳಿ (ಬಿಡದಿ), ಡಾಲಿ ಧನಂಜಯ ಅರಸೀಕೆರೆ, ಅಶಿಕಾ ರಂಗನಾಥ್ ತುಮಕೂರು, ಚಿಕ್ಕಣ್ಣ ಮೈಸೂರು, ಲೀಲಾವತಿ ಸೋಲದೇವನಹಳ್ಳಿ, ವಿನೋದ್ ರಾಜ್ ಸೋಲದೇವನ ಹಳ್ಳಿ, ದೊಡ್ಡಣ್ಣ ಬಿದರುಕಲ್ಲು ಮತದಾನ ಮಾಡಿದ್ದಾರೆ.