ಬೆಳಗಾವಿ : ಗೃಹಲಕ್ಷ್ಮಿ ಯೋಜನೆಗಳಿಗೆ ಅರ್ಜಿ ಸಲ್ಲಿಸುವ ವೇಳೆ ಮಧ್ಯವರ್ತಿಗಳ ಆಮಿಷಗಳಿಗೆ ಮಹಿಳೆಯರು ಕಿವಿಗೊಡಬಾರದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಶುಕ್ರವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸೇವಾ ಕೇಂದ್ರಗಳಿಗೆ ಇಲಾಖೆಯಿಂದಲೇ ಅರ್ಜಿಗೆ 20 ರೂ.ನೀಡುತ್ತೇವೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಜೊತೆ ಕೂಡ ಮಾತುಕತೆ ನಡೆಸಿದ್ದೇನೆ ಎಂದು ಹೇಳಿದರು.ಅರ್ಜಿ ಸಲ್ಲಿಸುವ ವೇಳೆ ಮಧ್ಯವರ್ತಿಗಳ ಆಮಿಷಗಳಿಗೆ ಮಹಿಳೆಯರು ಕಿವಿಗೊಡಬಾರದು. ಅರ್ಜಿ ಸಲ್ಲಿಕೆ ವೇಳೆ ಯಾರೂ ಒಂದು ರೂಪಾಯಿಯನ್ನೂ ಕೊಡಬೇಡಿ. ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆಗೆ ಯಾವುದೇ ಲಾಸ್ಟ್ ಡೇಟ್ ಇಲ್ಲ, ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸ್ವೀಕಾರ ಪ್ರಕ್ರಿಯೆ ನಿರಂತರವಾಗಿ ಇರಲಿದೆ ಎಂದು ಹೇಳಿದರು. ಅರ್ಜಿ ಸಲ್ಲಿಕೆ ವೇಳೆ ಯಾರಿಗೂ ಕೂಡ 1 ರೂಪಾಯಿ ಕೂಡಬೇಡಿ ಅರ್ಜಿ ಸಲ್ಲಿಸುವ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಹೇಳಿದರು.