ಬೆಂಗಳೂರು: ಚಕ್ರವರ್ತಿ ಸೂಲಿಬೆಲೆಯನ್ನು ಜೈಲಿಗೆ ಕಳಿಸಬೇಕಾಗುತ್ತದೆ ಎಂಬ ಸಚಿವ ಎಂಬಿ ಪಾಟೀಲ್ ಹೇಳಿಕೆಗೆ ಯತ್ನಾಳ್ ಟ್ವೀಟ್ ಮೂಲಕ ಕಿಡಿಕಾರಿದರು. ಇದೀಗ ಯತ್ನಾಳ್ ಟ್ವೀಟ್ ಗೆ ಖಾರವಾಗಿ ರೀ ಟ್ವೀಟ್ ಮಾಡಿರುವ ಎಂಬಿ ಪಾಟೀಲ್, ತಾಲಿಬಾನ್ ಆಡಳಿತ ಅಲ್ಲ, ಕರ್ನಾಟಕ ಎನ್ನುವುದನ್ನು ಮರೆಯಬಾರದು.
ಜೈಲಿಗೆ ಕಳುಹಿಸುತ್ತೇವೆ ಅನ್ನುವುದಕ್ಕೆ ಇವರೇನು ನ್ಯಾಯಾಧೀಶರೇ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದೆಲ್ಲಾ ಸಲ್ಲದು ಎಂದಿರುವ ಬಸನಗೌಡ ಪಾಟೀಲ್ ಯತ್ನಾಳ್ ಅವರೇ, ಕಳೆದ 4 ವರ್ಷಗಳ ಕಾಲ ಯೋಗಿ ಮಾಡೆಲ್, ಬುಲ್ಡೋಜರ್ ಮಾಡೆಲ್, ಎನ್ಕೌಂಟರ್ ಮಾಡೆಲ್, ಎಂದೆಲ್ಲಾ ನೀವು ಅಣಿಮುತ್ತು ಉದುರಿಸುವಾಗ ಪ್ರಜಾಪ್ರಭುತ್ವ ಎಲ್ಲಿ ಹೋಗಿತ್ತು? ಸತತವಾಗಿ ಸಂವಿಧಾನ ವಿರೋಧಿ ಹೇಳಿಕೆ ನೀಡಿರುವ ನಿಮ್ಮಿಂದ ಪಾಠ ಕಲಿಯಬೇಕಿಲ್ಲ ಎಂದು ಉಲ್ಲೇಖಿಸಿದ್ದಾರೆ.