ಬೆಂಗಳೂರು:- ರಾಜ್ಯ ಸರ್ಕಾರದ ಮುಡಾ ಹಗರಣ, ಹಾಗೂ ವಾಲ್ಮೀಕಿ ನಿಗಮದ ಬಹುಕೋಟಿ ಭ್ರಷ್ಟಾಚಾರ ಹಗರಣದ ಆರೋಪದ ಮುಂದಿಟ್ಟು ಇಂದಿನಿಂದ ದೋಸ್ತಿ ಪಕ್ಷಗಳು ಬೆಂಗಳೂರಿನಿಂದ ಮೈಸೂರಿಗೆ ಬೃಹತ್ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ.
ಅದರಂತೆ ಇಂದು ಕೆಂಗೇರಿಯ ನೈಸ್ ಜಂಕ್ಷನ್ ಬಳಿ ಇರುವ ಕೆಂಪಮ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ಮೂಲಕ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮತ್ತು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಇಂದು ಪಾದಯಾತ್ರೆಗೆ ಚಾಲನೆ ನೀಡಿದರು.
ಬೆಂಗಳೂರಿನಿಂದ ಮೈಸೂರಿಗೆ ಬೃಹತ್ ಪಾದಯಾತ್ರೆ ನಡೀತಿದ್ದು, ಪಾದಯಾತ್ರೆ ಆರಂಭಕ್ಕೂ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ನಾಡದೇವಿ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದ್ರು.