ನವದೆಹಲಿ: ಸಿದ್ದರಾಮಯ್ಯ ಸರಕಾರದಲ್ಲಿ ಹತ್ತಾರು ಭ್ರಷ್ಟಾಚಾರ ನಡೆಯುತ್ತಿದೆ. ಕೃಷಿ ಇಲಾಖೆಯಲ್ಲಿ ಭ್ರಷ್ಟಾಚಾರ ಮಿತಿಮೀರಿದೆ. ರಾಜ್ಯಪಾಲರಿಗೆ ದೂರು ನೀಡಲಾಗಿದೆ. ಬಿಬಿಎಂಪಿ ಗುತ್ತಿಗೆದಾರರು ಡಿಸಿಎಂ ವಿರುದ್ದ ಪರ್ಸೆಂಟೇಜ್ ಆರೋಪ ಮಾಡಿದ್ದಾರೆ. ಗುತ್ತಿಗೆದಾರರು ದಯಾಮರಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಗುತ್ತಿಗೆದಾರನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.
ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿಎಂ ಮನೆಯಿಂದಲೇ ಭ್ರಷ್ಟಾಚಾರ ಪ್ರಾರಂಭವಾಗಿದೆ. ಡಿಸಿಎಂ ಡಿಕೆ ಶಿವಕುಮಾರ್, ಚಲುವರಾಯಸ್ವಾಮಿ ರಾಜೀನಾಮೆ ನೀಡಬೇಕು. ಸರಕಾರಕ್ಕೆ ಮಾನಮರ್ಯಾದೆ ಇಲ್ಲ ಎಂದರು. ಗ್ಯಾರಂಟಿಗಳ ಕಾರಣಕ್ಕೆ ಅಭಿವೃದ್ಧಿ ಕುಂಠಿತವಾಗಿದೆ. ತಹಶಿಲ್ದಾರ್, ಡಿಸಿ ಲಂಚ ತಗೆದುಕೊಳ್ಳುತ್ತಿದ್ದಾರೆ.
17 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಿದ್ದರಾಮಯ್ಯ ಸರಕಾರ ಬಂದ ಮೇಲೆ ಹತ್ಯೆ ಹೆಚ್ಚಾಗುತ್ತಿದೆ ಎಂದರು. ಸರಕಾರ ಗುತ್ತಿಗೆದಾರ ಬಲಿ ತೆಗೆದುಕೊಳ್ಳುತ್ತಿದ್ದಾರೆ. ಕೃಷಿ ಅಧಿಕಾರಿಗಳು ಧೈರ್ಯ ಮಾಡಿ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಜನರ ವಿಶ್ವಾಸದ ಸರಕಾರವಾಗಿದ್ದರೆ ಸಚಿವರು ರಾಜೀನಾಮೆ ನೀಡಲಿ ಎಂದರು.