ಬೆಂಗಳೂರು : ಜಯದೇವ ಹೃದ್ರೋಗ ಆಸ್ಪತ್ರೆಯ ನಿವೃತ್ತ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ರಾಜಕೀಯ ಪ್ರವೇಶದ ಬಗ್ಗೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಾ. ಮಂಜುನಾಥ್ ಇಡೀ ದೇಶಾದ್ಯಂತ ತಮ್ಮದೇ ಆದ ಹೆಸರು ಮಾಡಿರೋರು . ಇಂತಹ ರಾಜಕೀಯ ಪರಿಸ್ಥಿತಿಯಲ್ಲಿ ಅಂಥವರು ಬರೋದು ಸರಿಯಲ್ಲ. ಅವರಿಗೆ ದೇಶದಲ್ಲಿ ಒಂದು ಒಳ್ಳೆಯ ಸ್ಥಾನಮಾನವಿದೆ ಡಾ. ಮಂಜುನಾಥ್ ಅವರ ವ್ಯಕ್ತಿತ್ವಕ್ಕೆ ಕಳಂಕ ತರುವ ತೀರ್ಮಾನ ನಾವು ಮಾಡಲ್ಲ ಎಂದು ಹೇಳಿದ್ದಾರೆ.
. ಮುಗಿಲಿತ್ತರದ ಹೆಸರಿದೆ ಇಂತಹ ಸಮಯದಲ್ಲಿ ರಾಜಕೀಯ ಪ್ರವೇಶ ಮಾಡಿ ಅಂತ ಒತ್ತಾಯಿಸುವುದಿಲ್ಲ. ರಾಜಕೀಯಕ್ಕೆ ಬರೋದಕ್ಕೆ ಅವರು ಸಮ್ಮತಿ ಸೂಚಿಸಿಲ್ಲ ಎಂದು ತಿಳಿಸಿದ್ದಾರೆ.