ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ 65 ನೇ ಜನ್ಮದಿನ. ಮುರ್ಮು ಅವರಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ರಾಜಕೀಯ ನಾಯಕರು, ಆಪ್ತ ವಲಯದವರು ಹಾಗೂ ಅವರ ಅಭಿಮಾನಿಗಳು ಶುಭಾಶಯ ತಿಳಿಸಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಜನ್ಮದಿನದ ಸುಭಾಶಯ ತಿಳಿಸಿದ ಜೆಡಿಎಸ್ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ ಮುರ್ಮು ಅವರಿಗೆ ದೇವರು ಉತ್ತಮ ಆಯಸ್ಸು, ಆರೋಗ್ಯ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕಾರ್ಯ ನಮಗೆಲ್ಲರಿಗೂ ಸ್ಫೂರ್ತಿ ನೀಡುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜುಲೈ 5, 2022 ರಂದು ಭಾರತದ 15ನೇ ರಾಷ್ಟ್ರಪತಿಯಾಗುವ ಮೂಲಕ ಇತಿಹಾಸವನ್ನು ಸೃಷ್ಟಿಸಿದರು. ಮುರ್ಮು ಅವರು ಭಾರತದ ಅತ್ಯುನ್ನತ ಸಾಂವಿಧಾನಿಕ ಹುದ್ದೆಯನ್ನು ವಹಿಸಿಕೊಂಡರು.
ತಾವು ಜನಸಾಮಾನ್ಯರ ರಾಷ್ಟ್ರಪತಿ ಎಂಬುದನ್ನು ಸಾರಿ ಹೇಳಿದ್ದಾರೆ. ‘ನನ್ನ ಹೃದಯ ಸದಾ ಹಿಂದುಳಿದವರ ಅಭಿವೃದ್ಧಿಗಾಗಿ ಮಿಡಿಯುತ್ತದೆ. ಅವರಿಗಾಗಿ ನಾನೇನಾದರೂ ಮಾಡಬೇಕು ಎಂದು ಇತ್ತೀಚೆಗಷ್ಟೇ ಹೇಳಿದ್ದರು.
ದ್ರೌಪದಿ ಮುರ್ಮು ಮಯೂರ್ಭಂಜ್ ಜಿಲ್ಲೆಯ ಉಪರಬೇಡ ಗ್ರಾಮದಲ್ಲಿ ಸಂತಾಲಿ ಬುಡಕಟ್ಟು ಕುಟುಂಬದಲ್ಲಿ 1958ರ ಜೂನ್ 20 ರಂದು ಜನಿಸಿದ ಮುರ್ಮು ಅವರು ಬ್ಯಾಂಕರ್ ಶ್ಯಾಮ್ ಚರಣ್ ಮುರ್ಮು ಅವರನ್ನು ವಿವಾಹವಾದರು, ಅವರು 2014 ರಲ್ಲಿ ನಿಧನರಾದರು. ಅವರ ಇಬ್ಬರು ಪುತ್ರರೂ ಕೂಡ ಮೃತಪಟ್ಟಿದ್ದಾರೆ. ಬಳಿಕ ಮಗಳಿಗೆ ಉತ್ತಮ ಶಿಕ್ಷಣವನ್ನು ಒದಗಿಸುವಲ್ಲಿ ಯಶಸ್ವಿಯಾದರು.