ದಾವಣಗೆರೆ:- ಚನ್ನಗಿರಿ ತಾಲೂಕಿನ ಜೋಳದಾಳ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ಜರುಗಿದೆ.
14 ಜನರನ್ನು ಚನ್ನಗಿರಿ ಸರ್ಕಾರಿ ಆಸ್ಪತ್ರೆಗೆ ಮತ್ತು 6 ಜನರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಭದ್ರಾವತಿ ಪಟ್ಟಣದ ಖಾಸಗಿ ಆಸ್ಪತ್ರೆಗೆ ಐವರನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬುಧವಾರ ರಾತ್ರಿಯಿಂದಲೇ ಕೆಲವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಮೊದಲು ನಾಲ್ಕು ಜನರರಲ್ಲಿ ವಾಂತಿ-ಬೇಧಿ ಕಂಡಿತು. ಬಳಿಕ ಗ್ರಾಮದ 25 ಜನರು ವಾತಿ-ಭೇದಿ ಬಳಲಿದರು.
ಜೋಳದಾಳ ಗ್ರಾಮಕ್ಕೆ ಚನ್ನಗಿರಿ ಇಒ ಬಿ.ಕೆ.ಉತ್ತಮ್, ಕುಡಿಯುವ ನೀರು ವಿಭಾಗದ ಎಇಇ ಲೋಹಿತ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜೋಳದಾಳ ಗ್ರಾಮದಲ್ಲಿ ವೈದ್ಯರ ತಂಡ ಠಿಕಾಣಿ ಹೂಡಿದೆ. ಕಾಯಿಸಿ ಆರಿಸಿದ ನೀರು ಕುಡಿಯುವಂತೆ ಗ್ರಾಮಸ್ಥರಿಗೆ ವೈದ್ಯರು ಸೂಚಿಸಿದ್ದಾರೆ.